ಮಸಾಜ್ ಸೆಂಟರ್ ಪ್ರಕರಣ: ನಟ ಸಾಧು ಕೋಕಿಲಗೆ ನಿರೀಕ್ಷಣಾ ಜಾಮೀನು

Posted By:
Subscribe to Oneindia Kannada

ಮೈಸೂರು, ಜನವರಿ 09: ಇಲ್ಲಿನ ಮಸಾಜ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಟ ಸಾಧು ಕೋಕಿಲ ಅವರಿಗೆ ಸದ್ಯಕ್ಕೆ ನೆಮ್ಮದಿ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸೋಮವಾರದಂದು ನಿರೀಕ್ಷಣಾ ಜಾಮೀನು ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಸಾಧು ಕೋಕಿಲ ಅವರು ನಿರೀಕ್ಷಣಾ ಜಾಮೀನು ಕೋರಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಜನವರಿ 01ರಂದು ಅರ್ಜಿ ಸಲ್ಲಿಸಿದ್ದರು.

Bogadi Massage Parlour Scandal Case : Actor Sadhu Kokila gets anticipatory bail

ವಿಚಾರಣೆ ನಡೆಸಿದ ನ್ಯಾಯಾಧೀಶ ಚಂದ್ರಶೇಖರ್‌ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಹಾಸ್ಯನಟ ಮಂಡ್ಯ ರಮೇಶ್‌ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂಬ ಸಂಗತಿ ತಿಳಿದು ಬಂದಿದೆ.

ಮಂಡ್ಯ ರಮೇಶ್, ಸಾಧುಕೋಕಿಲ ಮೇಲೆ ಲೈಂಗಿಕ ಶೋಷಣೆ ಆರೋಪ!

ಬೋಗಾದಿಯ ರೈಲ್ವೆ ಬಡಾವಣೆಯ 'ಲೈಕ್‌ ಟ್ರೆಂಡ್ ಹಾಗೂ ಫ್ಯಾಮಿಲಿ ಸಲೂನ್‌' ಮೇಲೆ ಇತ್ತೀಚೆಗೆ ವೇಶ್ಯಾವಾಟಿಕೆ, ಅಕ್ರಮ ವ್ಯವಹಾರದ ಶಂಕೆಯಿಂದ ಸರಸ್ವತಿಪುರಂ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ 24 ವರ್ಷದ ಮಹಿಳೆ, ಹಾಸ್ಯನಟರು ಹಾಗೂ ಪೊಲೀಸ್ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಮೈಸೂರಿನ ಒಡನಾಡಿ ಸಂಸ್ಥೆ ಮತ್ತು ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ. ಯುವತಿಯ ಆರೋಪದ ಮೇಲೆ ಮಸಾಜ್ ಸೆಂಟರ್ ಮಾಲೀಕ ರಾಜೇಶ್ ಬಂಧಿಸಲಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mysuru Massage Parlour Scandal Case : Actor Sadhu Kokila gets anticipatory bail from Sessions court in Mysuru. A woman rescued the woman from Like Trend Family Saloon, in Bogadi had accused actor Sadhu Kokila and Mandya Ramesh forcefully harassed her.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ