ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರಾಹ್ಮಣ ಸಮುದಾಯದವರಿಗೆ ಡಿಸಿಎಂ ಹುದ್ದೆ ನೀಡುವಂತೆ ಅಂಚೆ ಚಳವಳಿ

By Yashaswini
|
Google Oneindia Kannada News

ಮೈಸೂರು, ಮೇ 22 : ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆ ಆಗುತ್ತಿರುವ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಶಾಸಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ನಗರಪಾಲಿಕೆ ಮುಂಭಾಗ ಅಂಚೆ ಚಳವಳಿ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್.ಎನ್. ಶ್ರೀಧರಮೂರ್ತಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಆಡಳಿತದ ಪ್ರಮುಖ ಅಂಗ. ಉಪ ಮುಖ್ಯಮಮಂತ್ರಿ ಸ್ಥಾನಕ್ಕೆ ಅರ್ಹವಿರುವ ಬ್ರಾಹ್ಮಣ ಜನಪ್ರತಿನಿಧಿಗೆ ಆ ಸ್ಥಾನ ನೀಡಬೇಕು ಎಂದು ಹೇಳಿದರು.

ರೋಷನ್ ಬೇಗ್ ರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮುಸ್ಲಿಮರ ಆಗ್ರಹರೋಷನ್ ಬೇಗ್ ರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮುಸ್ಲಿಮರ ಆಗ್ರಹ

ಜಮೀರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ದರ್ಗಾದಲ್ಲಿ ಪ್ರಾರ್ಥನೆ

Brahmin community urges DCM post for Brahmin MLA in JDS- Congress government

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಜಮೀರ್ ಅಹಮದ್ ಖಾನ್ ಗೆ ಉಪಮುಖ್ಯಮಂತ್ರಿ ಸಿಗುವಂತೆ ಮೈಸೂರಿನಲ್ಲಿರುವ ಜಮೀರ್ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಡಿಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವ ನಾಲ್ವರು ಯಾರು?ಡಿಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವ ನಾಲ್ವರು ಯಾರು?

ಮೈಸೂರಿನಲ್ಲಿ ಜಮಿರ್ ಅಹಮದ್ ಖಾನ್ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಅಜ್ಜು ಬ್ರದರ್ಸ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಪಟ್ಟ ದೊರೆಯುವಂತೆ ಕೆವಿಸಿ ಹೋಟೆಲ್ ಬಳಿಯ ದರ್ಗಾದಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Brahmin community urges DCM post for Brahmin MLA in JDS- Congress government

ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬಂದು, ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಮೀರ್ ಗೆಲುವು ಸಾಧಿಸಿದ್ದಾರೆ. ಇನ್ನು ಡಿಸಿಎಂ ಪಟ್ಟಕ್ಕೆ ಕಾಂಗ್ರೆಸ್ ನಲ್ಲಿ ಭಾರಿ ಲಾಬಿ ನಡೆಯುತ್ತಿದ್ದು, ಕೆಲವರು ಎರಡು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.

English summary
Brahmin community leaders urges DCM post for Brahmin MLA in JDS- Congress government. Leaders organised postal campaign in Mysuru. Other hand Muslims offered prayer in Darga for DCM post to Zameer Ahmed Khan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X