ಅರಮನೆ ನಗರಿಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆಗಳು

Posted By:
Subscribe to Oneindia Kannada

ಚಾಮರಾಜನಗರ, ಜನವರಿ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಇಂದು ಮೈಸೂರು ಜಿಲ್ಲೆ ತಲುಪಿದೆ. ಜಿಲ್ಲೆಯಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಸಿದ್ದರಾಮಯ್ಯ ಅವರು ತವರು ಜಿಲ್ಲೆಗೆ ಆಗಮಿಸಿರುವ ಕಾರಣ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮಕ್ಕೆ ಸೇರುವ ನಿರೀಕ್ಷೆ ಇದೆ. ಬೆಳ್ಳಿಗ್ಗೆ ಚಾಮರಾಜನಗರದಲ್ಲಿ ದೇವರ ದರ್ಶನ ಪಡೆದ ಮುಖ್ಯಮಂತ್ರಿಗಳು 10.30ಕ್ಕೆ ಹೆಚ್.ಡಿ.ಕೋಟೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಜಿಲ್ಲೆಯ ಪ್ರಮುಖ ರಾಜಕೀಯ ಕ್ಷೇತ್ರಳಾದ ಎಚ್.ಡಿ.ಕೋಟೆ, ನಂಜನಗೂಡು, ಟಿ.ನರಸೀಪುರ ಪಟ್ಟಣಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿರುವುದೇನು?

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಜೊತೆಗೆ ಸ್ಥಳೀಯ ಶಾಸಕರು, ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಫಲಾನುಭವಿಗಳಿಗೆ ಯೋಜನೆಗಳನ್ನು ವಿತರಿಸಲಿದ್ದಾರೆ.

ತಮ್ಮ ಭಾಷಣದಲ್ಲಿ ಮೈಸೂರು ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪ್ರಸ್ತಾಪ ಮಾಡಲಿರುವ ಸಿದ್ದರಾಮಯ್ಯ ಅವರು ಮೈಸೂರು ರಾಜಕೀಯದ ವಿಮರ್ಶೆ ಮಾಡಲಿದ್ದಾರೆ ಎನ್ನಲಾಗಿದೆ.

ಸಂಕ್ರಾಂತಿ ವಿಶೇಷ ಪುಟ

ಮೈಸೂರು ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪಟ್ಟಿ ಇಲ್ಲಿದೆ...

ಗಾಯಾಳು ಚಿಕಿತ್ಸೆಗೆ ಟ್ರಾಮಾಕೇರ್ ನಿರ್ಮಾಣ

ಗಾಯಾಳು ಚಿಕಿತ್ಸೆಗೆ ಟ್ರಾಮಾಕೇರ್ ನಿರ್ಮಾಣ

115 ಕೋಟಿ ರೂ.ಗಳ ವೆಚ್ಚದಲ್ಲಿ 350 ಹಾಸಿಗೆಗಳ ಸಾಮಥ್ರ್ಯದಲ್ಲಿ ಮೈಸೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. 15 ಎಕೆರೆ ವಿಸ್ತೀರ್ಣದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಮೈಸೂರು ನಗರದಲ್ಲಿ ಪಿ.ಕೆ.ಟಿ.ಬಿ. ಆಸ್ಪತ್ರೆ ಆವರಣದಲ್ಲಿ ಗಾಯಾಳುಗಳ ಚಿಕಿತ್ಸೆಗಾಗಿ 22 ಕೋಟಿ ರೂ.ಗಳ ವೆಚ್ಚದಲ್ಲಿ ಟ್ರಾಮಾಕೇರ್ ಕೇಂದ್ರ ನಿರ್ಮಾಣವಾಗುತ್ತಿದ್ದು 105 ಹಾಸಿಗೆಗಳ ಸಾಮಥ್ರ್ಯವುಳ್ಳ ಆಸ್ಪತ್ರೆ ಇದಾಗಿದ್ದು ವೈದ್ಯಕೀಯ ಕ್ಷೇತ್ರದ ಪ್ರಮುಖ ಸಾಧನೆಯಾಗಿದೆ.

50 ಕೋಟಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ

50 ಕೋಟಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ

ವಿವಿಧ ಸರ್ಕಾರಿ ಇಲಾಖಾ ಕಚೇರಿಗಳನ್ನು ಒಂದೇ ಕಡೆ ನಿರ್ಮಿಸುವ ಕಾರಣಕ್ಕಾಗಿ ಜರ್ಮನ್ ಪ್ರೆಸ್ ಜಾಗದಲ್ಲಿ ಸುಮಾರು 59 ಕೋಟಿ ರೂ.ಗಳ ವೆಚ್ಚದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣದ ನಿರ್ಮಾಣ ಕಾರ್ಯ ರೂಪುಗೊಳ್ಳುತ್ತಿದೆ. ನಗರದ ಬಸವೇಶ್ವರ ವೃತ್ತದಿಂದ ಹಾರ್ಡಿಂಗ್ ವೃತ್ತದವರೆಗಿನ ಬಿ.ಎನ್.ರಸ್ತೆ, ಹಾರ್ಡಿಂಗ್ ವೃತ್ತದಿಂದ ಕೆ.ಆರ್.ವೃತ್ತದ ವರೆಗಿನ ಆಲ್ಬರ್ಟ್ ವಿಕ್ಟರ್ ರಸ್ತೆ, ಕೆ.ಆರ್.ವೃತ್ತದಿಂದ ಅಬ್ದುಲ್ ಕಲಾಂ ವೃತ್ತದವರೆಗೆ ಸಯ್ಯಾಜಿ ರಾವ್ ರಸ್ತೆ ಮತ್ತು ಅಬ್ದುಲ್ ಕಲಾಂ ವೃತ್ತದಿಂದ ಮಿಲೇನಿಯಂ ವೃತ್ತದವರೆಗಿನ ನೆಲ್ಸನ್ ಮಂಡೇಲಾ ರಸ್ತೆಯನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗಿದೆ.

ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆಗಳು

78.95 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ನಿರ್ಮಾಣ

78.95 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ನಿರ್ಮಾಣ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಆರಕ್ಷಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದ್ದು ವಿಶ್ರಾಂತಿ ಗೃಹ ನಿರ್ಮಾಣ, ಒಳಾಂಗಣ ಶೂಟಿಂಗ್ ರೇಂಜ್ ಮತ್ತು ನೂತನ ಪೊಲೀಸ್ ವಸತಿ ಗೃಹ ನಿರ್ಮಾಣ, ವಸತಿಗೃಹಗಳ ದುರಸ್ತಿ, ಮುಂತಾದ ಕಾಮಗಾರಿಗಳನ್ನು 56.28 ಕೋಟಿ ರೂ.ಗಳಲ್ಲಿ ಮಾಡಲಾಗಿದೆ. 78.95 ಕೋಟಿ ರೂ.ಗಳ ವೆಚ್ಚದಲ್ಲಿ ಮೈಸೂರು ನಗರದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ, ಸರ್ಕಾರಿ ಅಭಿಯೋಜಕರ ಕಟ್ಟಡ ನಿರ್ಮಾಣ, ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ, ಸ್ವಾತಂತ್ರ್ಯ ವಕೀಲರ ಭವನ ಹಾಗೂ ನ್ಯಾಯಾಧೀಶರ ನ್ಯಾಯಾಂಗ ನೌಕರರ ವಸತಿ ಗೃಹವನ್ನು ನಿರ್ಮಿಸಲಾಗಿದೆ.

33.60 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ

33.60 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ

ಮೈಸೂರಿನ ಪಡುವಾರಹಳ್ಳಿಯಲ್ಲಿ ಸರ್ಕಾರಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸುಮಾರು 45 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿದೆ. 2,160 ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದಿಂದ ಬಂದು ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 33.60 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳಾ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಪ್ರತಿ ವರ್ಷ 392 ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತಿದೆ.

ಉಡುಪಿ ಜಿಲ್ಲೆಗೆ ಸಿದ್ದರಾಮಯ್ಯ ಏನು ಕಾಣಿಕೆ ನೀಡಿದ್ದಾರೆ?

204 ಶುದ್ಧ ಕುಡಿಯುವ ನೀರಿನ ಘಟಕ

204 ಶುದ್ಧ ಕುಡಿಯುವ ನೀರಿನ ಘಟಕ

ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ 79.94 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಯೋಜನೆಯನ್ನು ರೂಪಿಸಲಾಗಿದ್ದು ಈವರೆಗೆ ಒಟ್ಟು 204 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿದೆ.

4,43,710 ಕೂಲಿಕಾರರಿಗೆ ಉದ್ಯೋಗ

4,43,710 ಕೂಲಿಕಾರರಿಗೆ ಉದ್ಯೋಗ

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಒಟ್ಟು 31 ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ 15 ಯೋಜನೆಗಳು ಪೂರ್ಣಗೊಂಡಿದ್ದು ಇದರಿಂದ 493 ಜನವಸತಿ ಪ್ರದೇಶಗಳಿಗೆ ನೀರನ್ನು ಒದಗಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ 2013-14ನೇ ಸಾಲಿನಿಂದ 2,01,618 ಗಿಂತಲೂ ಹೆಚ್ಚಿನ ಕುಟುಂಬಗಳಿಗೆ ಉದ್ಯೋಗ ಚೀಟಿಯನ್ನು ವಿತರಿಸಲಾಗಿದ್ದು ಈ ಪೈಕಿ ಒಟ್ಟು ಕುಟುಂಬಗಳು 1,58,267 (4,43,710 ಕೂಲಿಕಾರರು) ಉದ್ಯೋಗವನ್ನು ಪಡೆದಿರುತ್ತಾರೆ.

1,25,558 ಶೌಚಾಲಯ ನಿರ್ಮಾಣ

1,25,558 ಶೌಚಾಲಯ ನಿರ್ಮಾಣ

ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಮಹದಾಸೆಯಿಂದ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ 5,70,110 ಆದ್ಯತಾ ಕುಟುಂಬಗಳು ಸೇರಿ ಒಟ್ಟು 5,89,551 ಕುಟುಂಬಗಳ ಹಸಿವನ್ನು ನೀಗಿಸಲಾಗಿದೆ. 2013-14ನೇ ಸಾಲಿನಿಂದ ಜಿಲ್ಲೆಯಲ್ಲಿ ಒಟ್ಟು 1,25,558 ಶೌಚಾಲಯಗಳನ್ನು ನಿರ್ಮಿಸಲಾಗಿದೆ ಬಹಿರ್ದೆಸೆ ಮುಕ್ತ ಜಿಲ್ಲೆಯಾಗುವತ್ತ ಪ್ರಮುಖ ಹೆಜ್ಜೆಯನ್ನು ಇಟ್ಟಿದೆ.

ಮೈಸೂರು ವಿವಿಗೆ 50 ಕೋಟಿ

ಮೈಸೂರು ವಿವಿಗೆ 50 ಕೋಟಿ

ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಪ್ರತೀ ವಿಧಾನ ಸಭಾ ಕ್ಷೇತ್ರದಿಂದ ಮೂಲ ಸೌಕರ್ಯಗಳ ಕೊರತೆಯುಳ್ಳ 5 ಗ್ರಾಮಗಳನ್ನು ಆಯ್ಕೆ ಮಾಡಿ ಪ್ರತಿ ಗ್ರಾಮಕ್ಕೆ 75 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯ ಶತಮಾನೋತ್ಸವದ ಅಂಗವಾಗಿ ವಿಶ್ವವಿದ್ಯಾನಿಲಯಕ್ಕೆ 50 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.

33 ಕೆರೆಗಳ ನಿರ್ಮಾಣ

33 ಕೆರೆಗಳ ನಿರ್ಮಾಣ

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಗೆ ಒಟ್ಟು 10 ಹೊಸ ಪಶುವೈದ್ಯ ಸಂಸ್ಥೆಗಳನ್ನು ಮಂಜೂರು ಮಾಡಲಾಗಿದೆ. ಹಾಗೂ 5 ಪಶುವೈದ್ಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲಾಗಿದ್ದು 33 ಕೆರೆಗಳ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah is in Mysuru district today. He is inaugurating crores worth many development programs in the city. He is Visiting HD Kote, Nanjanagudu, T Narasipura.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ