ಸಿಎಂ ವಿರುದ್ಧ ವೃಥಾ ಆರೋಪಕ್ಕೆ ಸಚಿವ ಮಹದೇವಪ್ಪ ಖಂಡನೆ

By: ಯಶಸ್ವಿನಿ ಎಂ.ಕೆ
Subscribe to Oneindia Kannada

ಮೈಸೂರು, ಅಕ್ಟೋಬರ್ 12 : ಸಿಎಂ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರ, ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಯತೀಂದ್ರನ ಮೇಲೆ ಆರೋಪ ಹೊರಿಸಿದರೆ ತಕ್ಕ ಶಾಸ್ತಿ ಮಾಡ್ತೀನಿ: ಸಿಎಂ

83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಹಿನ್ನಲೆಯಲ್ಲಿ ಇಂದು ಸಮ್ಮೇಳನದ ಲಾಂಛನ ಬಿಡುಗಡೆ ಮತ್ತು ಕಾರ್ಯಾಲಯ ಉದ್ಘಾಟನೆಗೆ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯರ ವಿರುದ್ಧ ಬಿಜೆಪಿಯ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ರಾಜಕೀಯ ಷಡ್ಯಂತ್ರ ರಚಿಸಿದ್ದಾರೆ. ಸಿಎಂ ಸರಳ ಸಜ್ಜನಿಕೆಯ ವ್ಯಕ್ತಿ ವಿನಾಕಾರಣ ಭ್ರಷ್ಟಾಚಾರದ ಆರೋಪ ಮಾಡಲಾಗುತ್ತಿದೆ. ಸಿಎಂ ಇದುವರೆಗೂ ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

CM Siddaramaiah is a simple man, says HC Mahadevappa in Mysuru

ಮಳೆ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಮಳೆ ನಿಂತ ನಂತರ ಎಲ್ಲ ನಗರದ ರಸ್ತೆಯ ಗುಂಡಿಗಳನ್ನು ಮುಚ್ಚಲಿದ್ದೇವೆ ಎಂದರು. ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ನೀಡಿದ ಅವರು ಚುನಾವಣೆಯಲ್ಲಿ ಸೋಲಿಸಲು ಗೆಲ್ಲಿಸಲು ಇವರ್ಯಾರು? ಇವರ ಶಕ್ತಿ ಕಳೆದ ಚುನಾವಣೆಯಲ್ಲಿ ಜನರಿಗೆ ತಿಳಿದಿದೆ. ಮುಂಬರುವ ಚುನಾವಣೆಯಲ್ಲಿ ಜನರು ನಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಬಿಜೆಪಿ ಯವರು ಸೋಲುವ ಭೀತಿಯಲ್ಲಿ ಆಧಾರರಹಿತ ಆರೋಪ ಮಾಡ್ತಿದ್ದಾರೆ. ಡಾ ಯತೀಂದ್ರ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದರು. ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ್ ಪ್ರಸಾದ್ ,ಜಿ ಟಿ ಡಿ ಹಾಗೂ ವಿಶ್ವನಾಥ್ ಒಂದಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೆಯಿಂದಲೂ ಇದೇ ರೀತಿ ನಡೆದುಕೊಂಡು ಬಂದಿದೆ, ಚಾಮುಂಡೇಶ್ವರಿ ಬೈ ಎಲೆಕ್ಷನ್ ನಲ್ಲಿ ಎಲ್ಲಾ ದುಷ್ಟಶಕ್ತಿಗಳು ಸೇರಿ ಸಿದ್ದರಾಮಯ್ಯನವರನ್ನು ಸೋಲಿಸಲು ನಿಂತಿದ್ದರು. ಆದರೆ ಕ್ಷೇತ್ರದ ಜನತೆ ಅವರ ಕೈ ಹಿಡಿದಿದೆ. ಈ ಭಾರಿಯೂ ಕೂಡ ಜನ ಸಿದ್ದರಾಮಯ್ಯ ಕೈ ಹಿಡಿಯಲಿದ್ದಾರೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka CM Siddaramaiah has not involved in any corrupt activities, he is very simple man, Mysuru district incharge HC Mahadevappa, told to media in Mysuru today.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ