ಮಳವಳ್ಳಿಯಲ್ಲಿ ಡೆಂಗ್ಯೂಗೆ ಕಾಲೇಜು ವಿದ್ಯಾರ್ಥಿನಿ ಬಲಿ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮಂಡ್ಯ, ಜೂನ್ 22 : ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದರೂ ಡೆಂಗ್ಯೂ ಪೀಡಿತರ ಸಂಖ್ಯೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದೆ.

ಇದೀಗ ಜಿಲ್ಲೆಯ ಮಳವಳ್ಳಿಯ ಶಾಂತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವುದು ಸ್ಥಳೀಯರನ್ನು ಭಯಭೀತರನ್ನಾಗಿಸಿದೆ. ಮಳವಳ್ಳಿಯ ಧನಗೂರು ಗ್ರಾಮದ ನಿವಾಸಿ ಮರೀಗೌಡ ಎಂಬುವರ ಮಗಳು ಪಿ.ಎಂ.ವಿದ್ಯಾಶ್ರೀ ಡೆಂಗ್ಯೂ ಜ್ವರಕ್ಕೆ ಬಲಿಯಾದ ವಿದ್ಯಾರ್ಥಿನಿ. [ಡೆಂಗ್ಯೂ ತಡೆಗೆ ಯಾವ ಮುಂಜಾಗ್ರತಾ ಕ್ರಮ ಬೇಕು?]

College students dies of Dengue fever in Malavalli

ಈಕೆ ಮಳವಳ್ಳಿಯ ಶಾಂತಿ ವಿಜ್ಞಾನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಈಕೆಗೆ ಜ್ವರ ಕಾಣಿಸಿಕೊಂಡಿದ್ದು, ಮನೆಯವರು ಮಾಮೂಲಿ ಜ್ವರ ಎಂದು ಚಿಕಿತ್ಸೆ ನೀಡಿದ್ದಾರೆ. ಆದರೆ ಜ್ವರ ಕಡಿಮೆಯಾಗದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ವಿದ್ಯಾಶ್ರೀ ಮೃತಪಟ್ಟಿದ್ದಾಳೆ.

ಮೃತ ವಿದ್ಯಾರ್ಥಿನಿಗೆ ಶಾಂತಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಪುಟ್ಟಸ್ವಾಮಿ, ಪಿಯು ಕಾಲೇಜಿನ ಪ್ರಾಂಶುಪಾಲ ಶಿವಪ್ಪ ಸೇರಿದಂತೆ ಶಾಂತಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಸಂತಾಪ ಸೂಚಿಸಿದ್ದಾರೆ. [ಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರದ ದಾಂಗುಡಿಗೆ ಇಬ್ಬರು ಬಲಿ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A college student has died of dengue in Malavalli in Mysuru district. She was studying Shanti Science College in Malavalli. The fever is spreading even though precautionary measure have been taken to curb it.
Please Wait while comments are loading...