ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡಲ್ಲಿ ಕಾಂಗ್ರೆಸಿಗೆ ಭರ್ಜರಿ ಗೆಲುವು, ಮುಗ್ಗರಿಸಿದ ಬಿಜೆಪಿ

ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಂಡು ಸ್ಪರ್ಧಿಸಿದ್ದ ಕಳಲೆ ಕೇಶವಮೂರ್ತಿ 21,334 ಮತಗಳ ಭರ್ಜರಿ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

By Sachhidananda Acharya
|
Google Oneindia Kannada News

ಮೈಸೂರು, ಏಪ್ರಿಲ್ 13: ಭಾರೀ ಕುತೂಹಲ ಕೆರಳಿಸಿದ್ದ, ಜಿದ್ದಾ ಜಿದ್ದಿನ ಮತ ಬೇಟೆಗೆ ಸಾಕ್ಷಿಯಾಗಿದ್ದ ನಂಜನಗೂಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಬಿಜೆಪಿ ಹೀನಾಯ ಸೋಲು ಕಂಡಿದ್ದು ಭಾರೀ ಮುಖಭಂಗ ಅನುಭವಿಸಿದೆ.

ಗ್ಯಾಲರಿ: ಕಾಂಗ್ರೆಸ್ಸಿನ ಡಬ್ಬಲ್ ಧಮಾಕ, 2 ಕ್ಷೇತ್ರಗಳು ಕೈವಶ

ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಂಡು ಸ್ಪರ್ಧಿಸಿದ್ದ ಕಳಲೆ ಕೇಶವಮೂರ್ತಿ 21,334 ಮತಗಳ ಭರ್ಜರಿ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕಳಲೆ ಎನ್ ಕೇಶವಮೂರ್ತಿ 86,212 ಮತಗಳನ್ನು ಪಡೆದರೆ, ಶ್ರೀನಿವಾಸ್ ಪ್ರಸಾದ್ ಕೇವಲ 64,878 ಮತಗಳನ್ನು ಪಡೆಯಲಷ್ಟೇ ಸಫಲರಾದರು. ಈ ಮೂಲಕ ಕಳಲೆ ಕೇಶವಮೂರ್ತಿ ನಂಜನಗೂಡಿನ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.[ಉಪ ಚುನಾವಣೆ ಫಲಿತಾಂಶದ ಬಗ್ಗೆ ತಕರಾರು ತೆಗೆಯುವಂತೆಯೇ ಇಲ್ಲ]

 Congress candidate Kalale won Najnangud by-election with huge margin

ಇನ್ನು ಜಿದ್ದಾ ಜಿದ್ದಿನ ಫೈಟ್ ನಿಂದಾಗಿ ಯಾವ ಪಕ್ಷೇತರ ಅಭ್ಯರ್ಥಿಗಳೂ ಮೂರಂಕಿಯ ಮತ ಪಡೆದಿಲ್ಲ. ಮೂರನೇ ಸ್ಥಾನದಲ್ಲಿ ನೋಟಾ ಮತಗಳಿದ್ದು ಒಟ್ಟು 1,665 ನೋಟಾ ಮತಗಳು ಚಲಾವಣೆಯಾಗಿವೆ.

ನಂಜನಗೂಡು ಉಪಚುನಾವಣೆ ಕಾಂಗ್ರೆಸಿನ ಸಿದ್ದರಾಮಯ್ಯ ಮತ್ತು ವಿ. ಶ್ರೀನಿವಾಸ್ ಪ್ರಸಾದ್ ನಡುವಿನ ನೇರ ಹಣಾಹಣಿಯಾಗಿ ಮಾರ್ಪಟ್ಟಿತ್ತು. ಕಾಂಗ್ರೆಸಿನಿಂದ ಬಿಜೆಪಿಗೆ ಬಂದು ಸ್ಪರ್ಧಿಸಿದ್ದ ಶ್ರೀನಿವಾಸ್ ಪ್ರಸಾದ್ ಸೋಲುವುದರೊಂದಿಗೆ ಸಿದ್ದರಾಮಯ್ಯ ಕೈ ಮೇಲಾಗಿದೆ.[ಉಪ ಚುನಾವಣೆ ಫಲಿತಾಂಶ: ಯಾರಿಗೆ ಲಾಭ? ಯಾರಿಗೆ ನಷ್ಟ?]

 Congress candidate Kalale won Najnangud by-election with huge margin

ಕಳೆದ ಎರಡು ಚುನಾವಣೆಗಳಲ್ಲಿ ನಂಜನಗೂಡಿನಲ್ಲಿ ಗೆಲುವಿನ ನಗೆ ಬೀರಿದ್ದ ಶ್ರೀನಿವಾಸ್ ಪ್ರಸಾದ್ ಮೂರನೇ ಚುನಾವಣೆಯಲ್ಲಿ ಮುಗ್ಗರಿಸಿದರೆ, ಕಳೆದೆರಡು ಚುನಾವಣೆಗಳಲ್ಲಿ ಇದೇ ಪ್ರಸಾದ್ ವಿರುದ್ಧ ಸೋಲು ಕಂಡಿದ್ದ ಕಳಲೆ ಕೇಶವಮುರ್ತಿ ಮೂರನೇ ಚುನಾವಣೆಯಲ್ಲಿ ಗೆಲುವಿನ ಖಾತೆ ತೆರೆದಿದ್ದಾರೆ.

ನಂಜನಗೂಡಿನಲ್ಲಿ ಒಟ್ಟು 1,56,315 ಮತಗಳು ಅಂದರೆ ಶೇಕಡಾ 77.56 ಮತಗಳು ಚಲಾವಣೆಯಾಗಿತ್ತು.

English summary
Ruling congress won the Najangud by election. With huge margin of votes Congress candidate Kalale Keshavamurthy won the by-election against BJP candidate V Srinivasa Prasad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X