ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ, ಜೆಡಿಎಸ್‌ಗೆ ಮೇಯರ್ ಸ್ಥಾನ

By Manjunatha
|
Google Oneindia Kannada News

ಮೈಸೂರು, ಸೆಪ್ಟೆಂಬರ್ 05: ಅತಂತ್ರವಾಗಿರುವ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಲಿದ್ದು, ಮೇಯರ್ ಸ್ಥಾನ ಜೆಡಿಎಸ್‌ಗೆ ಸಿಗಲಿದೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ 19 ಸ್ಥಾನ ಗೆದ್ದಿದ್ದು, ಕಾಂಗ್ರೆಸ್ 18 ಸ್ಥಾನ ಗೆದ್ದಿದೆ ಹಾಗಾಗಿ ಹೆಚ್ಚು ಸ್ಥಾನ ಗೆದ್ದಿರುವ ಜೆಡಿಎಸ್‌ಗೆ ಮೇಯರ್ ಸ್ಥಾನ ಸಿಗುವುದು ಸೂಕ್ತ ಎಂದು ಸಚಿವರು ಹೇಳಿದರು.

ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?

ಇತ್ತೀಚೆಗೆ ನಡೆದ ಮೈಸೂರು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ 22 ಸ್ಥಾನ ದೊರೆತಿದೆ. ಜೆಡಿಎಸ್‌ಗೆ 19 ಹಾಗೂ ಕಾಂಗ್ರೆಸ್‌ಗೆ 18 ಸ್ಥಾನ ದೊರೆತಿದೆ. ಬಿಜೆಪಿ ಸಹ ಜೆಡಿಎಸ್ ಪಕ್ಷದವರನ್ನು ತಮ್ಮತ್ತ ಸೆಳೆದು ಅಧಿಕಾರ ಹಿಡಿಯುವ ಯತ್ನ ಮಾಡುತ್ತಿದೆ.

Congress jds colaition in Mysuru Metropolitan corporation

ಕಳೆದ ಬಾರಿ ಸಹ ಮೈಸೂರು ಮಹಾನಗರ ಪಾಲಿಕೆ ಅತಂತ್ರವಾಗಿತ್ತು. ಆಗ ಕಾಂಗ್ರೆಸ್‌ಗೆ 21 ಬಿಜೆಪಿಗೆ 18 ಹಾಗೂ ಜೆಡಿಎಸ್‌ಗೆ 19 ಸ್ಥಾನಗಳು ದೊರೆತಿತ್ತು.

ಅತಂತ್ರವಾದ ಮೈಸೂರು ಮಹಾನಗರ ಪಾಲಿಕೆ, ಇನ್ನು ಪಕ್ಷಾಂತರ ಪರ್ವ ಶುರು!ಅತಂತ್ರವಾದ ಮೈಸೂರು ಮಹಾನಗರ ಪಾಲಿಕೆ, ಇನ್ನು ಪಕ್ಷಾಂತರ ಪರ್ವ ಶುರು!

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಳಿಕ ಎಲ್ಲೆಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿರುತ್ತದೆಯೋ ಅಲ್ಲೆಲ್ಲಾ ಜೆಡಿಎಸ್-ಕಾಂಗ್ರೆಸ್ ಪಕ್ಷವು ಮೈತ್ರಿ ಮೂಲಕ ಅಧಿಕಾರ ಹಿಡಿಯಲಿದೆ, ಯಾವುದೇ ಕಾರಣಕ್ಕೂ ಎಲ್ಲಿಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೇಳಿದ್ದಾರೆ.

English summary
Congress-jds coalition in Mysuru metropolitan corporation. and mayor possition is goes to jds says jds minister SR Mahesh. In Mysuru JDS got 19 seats, congress gets 18 and BJP gets 22 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X