'ಉದ್ಯೋಗಕ್ಕೇ ಓಟು' ಅಭಿಯಾನಕಾರರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ

Posted By:
Subscribe to Oneindia Kannada

ಮೈಸೂರು, ಜನವರಿ 11: 'ಉದ್ಯೋಗಕ್ಕೇ ಓಟು' (ನೋ ಜಾಬ್ ನೋ ವೋಟ್) ಅಭಿಯಾನಕಾರರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಗೂಂಡಾತನ ತೋರಿದ್ದಾರೆ.

ನೋ ಜಾಬ್ ನೋ ವೋ ಅಭಿಯಾನದ ರಾಷ್ಟ್ರೀಯ ಸಂಚಾಲಕ ಚಂದ್ರ ಮಿಶ್ರ ಎಂಬುವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ.

ನಗರದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿ ಈ ದಾಳಿ ನಡೆದಿದ್ದು, ಪಾಲಿಕೆ ಸದಸ್ಯ ಪ್ರಶಾಂತ್ ಗೌಡ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಭಿಯಾನದ ಸದಸ್ಯರೊಂದಿಗೆ ಪ್ರಚಾರ ಕೈಗೊಂಡಾಗ ಸ್ಥಳಕ್ಕೆ ಧಾವಿಸಿದ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಚಂದ್ರ ಮಿಶ್ರ ಅವರ ಮೂಗು ಹಾಗೂ ಬಾಯಿಯಿಂದ ರಕ್ತ ಸುರಿಯುವಂತೆ ಕಾಂಗ್ರೆಸ್ ಕಾರ್ಯಕರ್ತ ಗೂಂಡಾಗಳು ಹಲ್ಲೆ ನಡೆಸಿದ್ದಾರೆ.

ಈ ಸಂಬಂಧ ಲಕ್ಷ್ಮಿಪುರಂ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭೆ ಕ್ಷೇತ್ರದಲ್ಲಿ ಅಭಿಯಾನ ನಡೆಸಲು ಉದ್ದೇಶಿಸಿದ್ದರು.

ಇದೇ ತಂಡ ಇತ್ತೀಚೆಗೆ ಕೆಪಿಸಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತ್ತು, ಅಷ್ಟೆ ಅಲ್ಲದೆ ರಾಜ್ಯದ ಹಲವೆಡೆ ಅಭಿಯಾಮದ ಅಂಗವಾಗಿ ಉದ್ಯೋಗ ನೀಡುವವರಿಗೆ ಮಾತ್ರ ಓಟು ನೀಡಲು ಮನವಿ ಮಾಡುತ್ತಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In Mysuru Congress workers attacked on 'No Job No Vote' campaigners. campaigns national convener Chandra Mishra badly beaten by congress workers. Complaint lodge in Lakshmipuram police station.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ