ಫೇಸ್ ಬುಕ್ ನಲ್ಲಿ ದಿನೇಶ್ ಗುಂಡೂರಾವ್ ಗೆ ಸಿಂಹ ಹಿಗ್ಗಾ – ಮುಗ್ಗಾ ಕ್ಲಾಸ್!

Posted By: ಯಶಸ್ವಿನಿ ಎಂ.ಕೆ
Subscribe to Oneindia Kannada

ಮೈಸೂರು, ಏಪ್ರಿಲ್ 15 : ದಿನೇಶ್ ಗುಂಡುರಾವ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಟ್ವಿಟ್ಟರ್ ಲೈವ್ ನಲ್ಲಿ ಬಂದು ಗುಂಡೂರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಬೇಕಿತ್ತು. ಆಗ ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು. ನಾಲಗೆ ಮೇಲೆ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊ ಹಾಗೂ ಕಥುವಾ ಘಟನೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ದಿನೇಶ್​ ಗುಂಡೂರಾವ್ ಆದಿತ್ಯನಾಥ್​​ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಲು ನಾಲಾಯಕ್​. ಅವರು ಕರ್ನಾಟಕಕ್ಕೆ ಬಂದರೆ ಕಳಂಕ ಅವರು ಇಲ್ಲಿಗೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದಿದ್ದರು. ಈ ಹಿನ್ನೆಲೆ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಜಾತಿ ಬಣ್ಣಕ್ಕೆ ತಿರುಗಿತು ಯೋಗಿ ವಿರುದ್ದದ ದಿನೇಶ್ ಗುಂಡೂರಾವ್ ಹೇಳಿಕೆ

ಈ ವೇಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನಿಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Twitter video: Member of Parliament form Mysuru-Kodagu constituency BJP's Pratap Simha blames Congress leader Dinesh Gundurao for his controversial statement on Uttar Pradesh chief minister Yogi Adityananth.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ