ಮೈಸೂರಿನಲ್ಲಿ ನಟ ದರ್ಶನ್ ತೂಗುದೀಪ ಕಾರು ಅಪಘಾತ
Recommended Video

ಮೈಸೂರು, ಸೆಪ್ಟೆಂಬರ್ 24: ಚಿತ್ರ ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಅವರ ಬಲ ಮುಂಗೈ ಮುರಿದಿದೆ ಎಂದು ವರದಿಗಳು ತಿಳಿಸಿವೆ.
ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಘಟನೆ ನಡೆದಿದ್ದು, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತವಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ದರ್ಶನ್ ಅವರೊಂದಿಗೆ ನಟರಾದ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಸಹ ಪ್ರಯಾಣಿಸುತ್ತಿದ್ದರು. ಅವರಿಗೂ ಗಾಯವಾಗಿದ್ದು, ಮೂವರಿಗೂ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.ಲೇಟಸ್ಟ್ ಮಾಹಿತಿಯ ಪ್ರಕಾರ ಅಪಘಾತವಾಗುತ್ತಿದ್ದ ಸಮಯದಲ್ಲು ದರ್ಶನ್ ಕಾರು ಓಡಿಸುತ್ತಿರಲಿಲ್ಲ ಎಂದೂ ಹೇಳಲಾಗುತ್ತಿದೆ.
ಪೊಲಿಸ್ ಪ್ರಕರಣವಾಗಬಾರದು ಎಂಬ ಕಾರಣಕ್ಕೆ ದರ್ಶನ್ ಕಾರು ಚಲಾಯಿಸುತ್ತಿರಲಿಲ್ಲ ಎನ್ನಲಾಗುತ್ತಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ.
ಅಪಘಾತದ ನಂತರ ನಾಪತ್ತೆಯಾಗಿದ್ದ ಅವರ ಆಡಿ ಕ್ಯೂ7 ಕಾರು ನಾಪತ್ತೆಯಾಗಿ ಅಚ್ಚರಿ ಮೂಡಿಸಿತ್ತು. ಆದರೆ ಆ ಕಾರು ಬೆಂಗಳೂರಿಗೆ ಶಿಫ್ಟ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.

ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ
ತಡರಾತ್ರಿ ಖಾಸಗೀ ಹೊಟೇಲ್ ನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ನಟ ದೇವರಾಜ್ ,ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಮತ್ತೋರ್ವ ಸ್ನೇಹಿತನಿಗೂ ಗಾಯವಾಗಿ ಎಂದು ವರದಿಗಳು ತಿಳಿಸಿವೆ.

ದರ್ಶನ್ ಗೆ ಶಸ್ತ್ರ ಚಿಕಿತ್ಸೆ
ದರ್ಶನ್ ಅವರ ಕೈ ಮುರಿದ ಪರಿಣಾಮ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಅವರಿಗೆ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದೆ.

ಅಪಘಾತ ಆಗಿದ್ದೇಕೆ?
ಚಾಲಕನ ನಿಯಂತ್ರಣ ತಪ್ಪಿ, ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದ್ದು, ಕಾರು ಪಂಚರ್ ಆದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿ ನಟರು ಸುಮಾರು 3:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಡೆಯ ಚಿತ್ರದ ಶೂಟಿಂಗ್
'ಒಡೆಯ' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ದರ್ಶನ್, ಅದಕ್ಕೆಂದೇ ಮೈಸೂರಿಗೆ ತೆರಳಿದ್ದರು ಎನ್ನಲಾಗಿದೆ. ಕಾರ್ಯಕ್ರಮ ಮುಗಿಸಿ ತಡರಾತ್ರಿ ಮೈಸೂರಿನಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.ಅಪಘಾತವಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications