ಆ.21ಕ್ಕೆ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದಿಂದ ಗಜ ಪಯಣ

Posted By:
Subscribe to Oneindia Kannada

ಮೈಸೂರು, ಆಗಸ್ಟ್ 19: ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಆಗಸ್ಟ್ 21ರಂದು ಬೆಳಿಗ್ಗೆ 11ಕ್ಕೆ ಹುಣಸೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯಿತಿ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದಿಂದ ಗಜ ಪಯಣ ಹೊರಡಲಿದೆ. ಆಗಸ್ಟ್ 26ರಂದು ಮೈಸೂರಿನ ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ದಸರಾ ಆನೆಗಳಿಗೆ ಸ್ವಾಗತ ನೀಡಲಾಗುವುದು.[ದಸರಾ ಆಚರಣೆಗೆ ಆದ್ಯತೆ: ಮೈಸೂರು ಹೊಸ ಡಿಸಿ ರಣದೀಪ್]

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಗಜ ಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಪಿ. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.[ದಸರೆಗೆ ಮೈಸೂರಲ್ಲಿ ವಿಮಾನಯಾನ ಮತ್ತೆ ಶುರು ಮಾಡಿ: ಪ್ರತಾಪ್ ಸಿಂಹ]

Dasara elephants journey will start on August 21st

ಇನ್ನೂ ಯಾರ್ಯಾರು ಇರ್ತಾರೆ?: ಸಚಿವ ತನ್ವೀರ್ ಸೇಠ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಬಿ.ಎಲ್. ಭೈರಪ್ಪ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಹೀಮಾ ಸುಲ್ತಾನ ನಜೀರ್ ಅಹಮದ್, ಲೋಕಸಭಾ ಸದಸ್ಯರಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು.

ವಿಧಾನಸಭಾ ಸದಸ್ಯರಾದ ವಿ. ಶ್ರೀನಿವಾಸ್ ಪ್ರಸಾದ್, ಜಿ.ಟಿ. ದೇವೇಗೌಡ, ಕೆ. ವೆಂಕಟೇಶ್, ವಾಸು, ಸಾ.ರಾ. ಮಹೇಶ್, ಚಿಕ್ಕಮಾದು, ಎಂ.ಕೆ. ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ. ನಟರಾಜು, ಚಿಲ್ಕುಂದ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಲಕ್ಷ್ಮೀ ಸಿ.ಟಿ. ರಾಜಣ್ಣ.

ಹನಗೂಡು ಕ್ಷೇತ್ರ ಜಿಲ್ಲಾ ಪಂಚಾಯಿತಿ ಸದಸ್ಯ ಅನಿಲ್‌ಕುಮಾರ ಚಿಕ್ಕಮಾದು, ಹುಣಸೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಮ್ಮ ಬಸವರಾಜು, ಉಮ್ಮತ್ತೂರು ತಾ.ಪಂ. ಸದಸ್ಯ ರಾಜೇಂದ್ರ ಬಾಯಿ, ಗುರುಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಹಾಗೂ ದೊಡ್ಡಹೆಜ್ಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹದೇವಮ್ಮ ಬಾಲರಾಜ್ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mysuru dasara elephants journey will start on August 21st from Hunsur taluk nagapura tribal school. Elephants will reach Mysuru palace on August 26th.
Please Wait while comments are loading...