ಚಿತ್ರಗಳು : ಮೈಸೂರಲ್ಲಿ ಪೊಲೀಸರ ಪಥಸಂಚಲನ

Posted By:
Subscribe to Oneindia Kannada

ಮೈಸೂರು, ಮಾರ್ಚ್ 15 : ವಿಶ್ವಹಿಂದೂ ಪರಿಷತ್ ಮತ್ತು ಬಿಜೆಪಿ ಕಾರ್ಯಕರ್ತ ರಾಜು ಅವರ ಹತ್ಯೆ ಬಳಿಕ ಉದ್ವಿಗ್ನಗೊಂಡಿದ್ದ ಮೈಸೂರು ನಗರ ಸಹಜ ಸ್ಥಿತಿಯತ್ತ ಮರಳಿದೆ. ಮಂಗಳವಾರ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿದ್ದು, ಪ್ರವಾಸಿಗರು ನಗರಕ್ಕೆ ಆಗಮಿಸಿದ್ದಾರೆ. [ಕರ್ನಾಟಕದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ: ಪ್ರತಾಪ್ ಸಿಂಹ]

ಭಾನುವಾರ ಸಂಜೆ ರಾಜು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜಯ ಹತ್ಯೆ ಖಂಡಿಸಿ ಸೋಮವಾರ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವೇಳೆ ಹಿಂಸಾಚಾರ ನಡೆದಿತ್ತು. ಮಂಗಳವಾರ ನಗರದ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ. [ಮೈಸೂರಲ್ಲಿ ರಾಜು ಹತ್ಯೆ : ಯಾರು, ಏನು ಹೇಳಿದರು?]

mysuru

ಕ್ಯಾತಮಾರನಹಳ್ಳಿಯಲ್ಲಿ ಸೋಮವಾರ ಸಂಜೆ ರಾಜು ಅವರ ಅಂತ್ಯಕ್ರಿಯೆ ನಡೆದಿತ್ತು. ರಾಜು ಅವರ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ನೂರಾರು ಜನರ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಂಗಳವಾರವೂ ರಾಜು ಅವರ ಮನೆಯ ಸುತ್ತ-ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. [ಬಿಜೆಪಿ ಕಾರ್ಯಕರ್ತನ ಕೊಲೆ, ಕೋಮು ಗಲಭೆ ಎಚ್ಚರಿಕೆ]

mysuru city

ಉದಯಗಿರಿ, ಎನ್.ಆರ್.ಮೊಹಲ್ಲಾ ಹಾಗೂ ಮಂಡಿ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಪೊಲೀಸರು ಮಂಗಳವಾರ ಪಥಸಂಚಲನ ನಡೆಸಿದರು. ಜನಜೀವನ ಸಹಜ ಸ್ಥಿತಿಗೆ ಮರಳಿದರೂ ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. [ಮೈಸೂರು ಬಂದ್ ಹಿಂಸಾಚಾರಕ್ಕೆ ತಿರುಗಿದ್ದು ಹೇಗೆ?]

police

ಸೋಮವಾರ ನಗರದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಆದ್ದರಿಂದ, ಮೈಸೂರು ಅರಮನೆಗೆ ಪ್ರವಾಸಿಗರು ಆಗಮಿಸಿರಲಿಲ್ಲ. ಇಂದು ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದ್ದು, ಪ್ರವಾಸಿರುವ ಅರಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. [ಮೈಸೂರು : ರಾಜು ಕೊಲೆ ಪ್ರಕರಣದ ತನಿಖೆ ಸಿಸಿಬಿಗೆ]

mysuru news

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Tension prevailed in Mysuru city on Monday March 14th, 2016 after a 32-year-old Vishwa Hindu Parishad (VHP), BJP worker Raju was murdered in Udaygiri police station limits on Sunday. On Tuesday situation under control in city.
Please Wait while comments are loading...