ಡಿ. 24ರಂದು ದಸಂಸ ರಾಜ್ಯ ಮಟ್ಟದ ಸಮಾವೇಶ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಡಿಸೆಂಬರ್ 22 : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣದ ಅಂಗವಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಬೌದ್ಧ ಸಮಾಜ ನಿರ್ಮಾಣದ ಸಂಕಲ್ಪ ರಾಜ್ಯಮಟ್ಟದ ಸಮಾವೇಶವನ್ನು ಡಿ.24ರಂದು ಮೈಸೂರಿನ ವೈದ್ಯಕೀಯ ಕಾಲೇಜು ಅಮೃತ ಮಹೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಬೆಲವೆತ್ತ ರಾಮಚಂದ್ರ ಅವರು ತಿಳಿಸಿದರು.

ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಅಂಬೇಡ್ಕರ್ ಬಾವಚಿತ್ರದ ಅನಾವರಣವನ್ನು ರಾಜ್ಯದ ಲೋಕೋಪಯೋಗಿ ಸಚಿವ ಹಾಗೂ ಮೈಸೂರಿನ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಆರ್. ಧ್ರುವನಾರಾಯಣ್, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಹುಣಸೂರು ಶಾಸಕ ಎಚ್‍.ಪಿ. ಮಂಜುನಾಥ್, ವಿಧಾನ ಪರಿಷತ್ ಆರ್. ಧರ್ಮಸೇನಾ, ಜಿಲ್ಲಾಧಿಕಾರಿ ಡಿ. ರಂದೀಪ್, ಮೆಡಿಕಲ್ ಕಾಲೇಜು ನಿರ್ದೇಶಕ ಮತ್ತು ಡೀನ್ ಕೃಷ್ಣಮೂರ್ತಿ ಮೊದಲಾದವರು ಭಾಗವಹಿಸಲಿದ್ದಾರೆ.[ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ : ಪರ, ವಿರೋಧ ಪ್ರತಿಭಟನೆ]

December 24, the state-level convention DSS

ಸಮಾವೇಶದ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಚೇತವನ ಬೌದ್ಧ ವಿಹಾರದ ಮನೋರಖ್ಖಿತ ಭಂತೇಜಿ ಹಾಗೂ ಜ್ಞಾನಪ್ರಕಾಶ್ ಸ್ವಾಮೀಜಿ ವಹಿಸಲಿದ್ದು, ದಸಂಸ ರಾಜ್ಯ ಸಂಚಾಲಕ ಲಕ್ಷ್ಮೀ ನಾರಾಯಣ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
On December 24, the state-level convention dalit sangarsh samiti in mysuru
Please Wait while comments are loading...