• search

ಮೈಸೂರು ದಸರಾ 2018: ಅಕ್ಟೋಬರ್ 10ರ ಕಾರ್ಯಕ್ರಮಗಳ ವಿವರ

Subscribe to Oneindia Kannada
For mysore Updates
Allow Notification
For Daily Alerts
Keep youself updated with latest
mysore News

  ಮೈಸೂರು, ಅಕ್ಟೋಬರ್ 10 : ನಾಡಹಬ್ಬ ಮೈಸೂರು ದಸರಾ-2018 ಅಕ್ಟೋಬರ್ 10ರ ವಿವಿಧ ಕಾರ್ಯಕ್ರಮಗಳ ವಿವರ ಇಂತಿದೆ.

  ಬೆಳಗ್ಗೆ 9 ಗಂಟೆಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೊಲೀಸ್ ಸಹಾಯ ಕೇಂದ್ರ (ಕಿಯಾಸ್ಕ್) ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು.

  ಮೈಸೂರು ದಸರಾ ಉದ್ಘಾಟನೆ LIVE: ಇದು ನನ್ನ ಪೂರ್ವಜನ್ಮದ ಪುಣ್ಯ ಎಂದ ಸುಧಾಮೂರ್ತಿ

  9-30ಕ್ಕೆ ದಸರಾ ಕ್ರೀಡಾಜ್ಯೋತಿಯನ್ನು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಉದ್ಘಾಟಿಸುವರು. 11-30ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರು ದಸರಾ ಚಲನಚಿತ್ರೋತ್ಸವನ್ನು ಉದ್ಘಾಟಿಸುವರು.

  Details of various programs on October 10th

  ಮಧ್ಯಾಹ್ನ 2 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪಕ್ಕದ ಮುಡಾ ಮೈದಾನದಲ್ಲಿ ಆಹಾರ ನಾಗರೀಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ಆಹಾರ ಮೇಳಕ್ಕೆ ಚಾಲನೆ ನೀಡುವರು.

  ಮೈಸೂರಿಗೆ ಆಗಮಿಸಿದ ಸುಧಾ ನಾರಾಯಣ್ ಮೂರ್ತಿ, ಜಿಲ್ಲಾಡಳಿತದಿಂದ ಸ್ವಾಗತ

  ಮಧ್ಯಾಹ್ನ 3-30ಕ್ಕೆ ದೇವರಾಜ ಅರಸು ವಿವಿದೋದ್ದೇಶ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸುವರು.

  4 ಗಂಟೆಗೆ ಕಾಡಾ ಕಚೇರಿ ಮೈದಾನದಲ್ಲಿ ಪುಸ್ತಕ ಮಳಿಗೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲ ಉದ್ಘಾಟಿಸುವರು.

  Details of various programs on October 10th

  4 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಕ್ರೀಡಾಕೂಟವನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಉದ್ಘಾಟಿಸುವರು.

  4-30ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಗಾಜಿನ ಮನೆ ಲೋಕಾರ್ಪಣೆಯನ್ನು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ನೆರವೇರಿಸುವರು.

  ದಸರಾ ಉದ್ಘಾಟನೆ - ಸಾಮಾನ್ಯಳಿಗೆ ಸಿಕ್ಕ ದೊಡ್ಡ ಸನ್ಮಾನ : ಸುಧಾ ಮೂರ್ತಿ

  4-30ಕ್ಕೆ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ವಸ್ತುಪ್ರದರ್ಶನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡುವರು.

  4-45ಕ್ಕೆ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ವಾರ್ತಾ ಇಲಾಖೆ ವಸ್ತು ಪ್ರದರ್ಶನವನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಉದ್ಘಾಟಿಸುವರು.

  4-45ಕ್ಕೆ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಸಚಿವರಾದ ಎಂ.ಸಿ. ಮನಗೂಳಿ ಚಾಲನೆ ನೀಡುವರು.

  6-15ಕ್ಕೆ ಹಸಿರು ಮಂಟಪ, ಸಯ್ಯಾಜಿರಾವ್ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಚಾಲನೆ ನೀಡುವರು.

  6 ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೆರವೇರಿಸುವರು.

  ಇನ್ನಷ್ಟು ಮೈಸೂರು ಸುದ್ದಿಗಳುView All

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Mysore Dasara 2018: Details of various programs on October 10th. Here are the details of programs that take place from 9 am to 6 pm.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more