ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಲ್ಲಿ ಅರಸು ಜನ್ಮಶತಮಾನೋತ್ಸವಕ್ಕೆ ಚಾಲನೆ

By Mahesh
|
Google Oneindia Kannada News

ಮೈಸೂರು, ಆಗಸ್ಟ್ 17: ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಸ್ಟ್ 20ರಂದು ಮೈಸೂರು ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಅವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ಕಾರದ ವತಿಯಿಂದ ರಾಜ್ಯದೆಲ್ಲೆಡೆ ಅರಸು ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಆಚರಿಸಲಾಗುತ್ತದೆ.

ಆ. 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನ್ಮ ಶತಮಾನೋತ್ಸವ ಆಚರಣೆಗೆ ಚಾಲನೆ ನೀಡಲಿದ್ದು, ದೇವರಾಜ ಅರಸು ನಂತರದ ಎಲ್ಲಾ ಮಾಜಿ ಮುಖ್ಯಮಂತ್ರಿಗಳನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗುತ್ತದೆ. ಅರಸು ಕುಟುಂಬದವರು ಸಹ ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ಪ್ರಸಾದ್ ತಿಳಿಸಿದರು.

Devaraj Urs birth centenary celebrations to begin on August 20

* ಆಗಸ್ಟ್ 20 ರಂದು 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
* 11.15ಕ್ಕೆ ಹುಣಸೂರಿನಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
* 11.30ಕ್ಕೆ ಡಿ. ದೇವರಾಜ ಅರಸು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
* 12ಕ್ಕೆ ಅರಸುರವರ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಕಲ್ಲಹಳ್ಳಿ ಗ್ರಾಮದ ದತ್ತು ಸ್ವೀಕಾರ ಘೋಷಣೆ ಮಾಡಲಿದ್ದಾರೆ.
* ಮಧ್ಯಾಹ್ನ 1ಕ್ಕೆ ಮೈಸೂರಿಗೆ ಆಗಮಿಸಿ 3 ಗಂಟೆಗೆ ಮಾನಸ ಗಂಗೋತ್ರಿಯ ಬಯಲು ರಂಗಮಂದಿರಲ್ಲಿ ಏರ್ಪಡಿಸಲಾಗಿರುವ ಅರಸು ಶತಮಾನೋತ್ಸವ ಮತ್ತು ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮೈಸೂರು ರಾಜ್ಯವನ್ನು 'ಕರ್ನಾಟಕ' ಎಂದು ಮರು ನಾಮಕರಣ ಮಾಡಲು ಕಾರಣರಾದವರಲ್ಲಿ ದೇವರಾಜ್ ಅರಸು ಅವರು ಪ್ರಮುಖರು. ಅರಸು ಅವರು ಕೈಗೊಂಡ ಭೂ ಸುಧಾರಣೆ, ದಲಿತರ ಏಳಿಗೆಗಾಗಿ ಕೈಗೊಂಡ ಕ್ರಮಗಳು ಅನುಕರಣೀಯ. ಅರಸು ಅವರ ಬಗ್ಗೆ ಒಂದು ಮ್ಯೂಸಿಯಂ ಸ್ಥಾಪಿಸಲಾಗುವುದು, ಈ ವರ್ಷ ಅವರ ಜೀವನ -ಸಾಧನೆ ಕುರಿತ ಕೃತಿಯನ್ನು ರಚಿಸಿ ವಿವಿಧ ಭಾಷೆಗಳಿಗೆ ಅನುವಾದಿಸಲಾಗುವುದು ಎಂದು ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದರು.

English summary
The State government will celebrate the birth centenary of the former Chief Minister of Karnataka late D. Devaraj Urs for a year starting on August 20. Chief Minister Siddaramaiah will inaugurate the year-long celebrations at the Open Air Theatre in Manasagangotri postgraduate campus of the University of Mysore here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X