ಕಪ್ಪ ಕಾಣಿಕೆ ಆರೋಪ ನೂರಕ್ಕೆ ನೂರು ಸತ್ಯ: ಯಡಿಯೂರಪ್ಪ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಮಾರ್ಚ್ 21: ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಸಚಿವರು ನೂರಾರು ಕೋಟಿ ರೂಪಾಯಿ ಕಪ್ಪ ಕಾಣಿಕೆ ನೀಡಿರುವುದಾಗಿ ನಾನು ಮಾಡಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ನುಡಿದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋವಿಂದರಾಜು ಮನೆಯಲ್ಲಿ ಸಿಕ್ಕಿರುವ ಡೈರಿ ನಕಲಿ ಎಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ ಎನ್ನುವುದು ಮೂರ್ಖತನದ ಪರಮಾವಧಿ. ಈ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಲೆಬುಡವಿಲ್ಲದ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದಾರೆ.[ಸಿದ್ದರಾಮಯ್ಯನವರಿಂದ ಅಧಿಕಾರ ದುರುಪಯೋಗ: ಶೋಭಾ ಕರಂದ್ಲಾಜೆ]

Diary gate case is 100% true: BSY

ಸ್ಟೀಲ್ ಬ್ರಿಡ್ಜ್ ಗುತ್ತಿಗೆ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಸದಸ್ಯರಿಗೆ 65 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದು ಗೋವಿಂದರಾಜು ಡೈರಿಯಲ್ಲಿ ಉಲ್ಲೇಖವಾಗಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದಿದ್ದಾರೆ.[ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು]

ನಿನ್ನೆ ತಾನೇ ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಕರ್ನಾಟಕ ತೆರಿಗೆ ಇಲಾಖೆ ಡೈರಿಗೇಟ್ ವಿಚಾರಣೆಯ ಸಂದರ್ಭದಲ್ಲಿ ಸಿಕ್ಕ ಪುರಾವೆಗಳ್ಯಾವವೂ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Diary gate case is 100% true State BJP president, former Karnataka chief minister B.S.Yeddyurappa told in Mysuru today.
Please Wait while comments are loading...