ಚಾಮುಂಡೇಶ್ವರಿ ದೇವಿಯ ತಂಗಿ ಚಿಕ್ಕದೇವಮ್ಮನ ನೆಲೆ ಗೊತ್ತಾ?

By: ಬಿ.ಎಂ.ಲವಕುಮಾರ್
Subscribe to Oneindia Kannada

ಚಾಮುಂಡೇಶ್ವರಿಯ ಏಳು ಸಹೋದರಿಯರಲ್ಲಿ ಒಬ್ಬಳಾಗಿ ಎಚ್.ಡಿ.ಕೋಟೆ ತಾಲೂಕಿನ ಪುರದಕಟ್ಟೆ ಬಳಿಯ ಚಿಕ್ಕದೇವಮ್ಮನವರ ಬೆಟ್ಟದಲ್ಲಿ ನೆಲೆ ನಿಂತಿರುವ ಚಿಕ್ಕದೇವಮ್ಮ ದೇವಿ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುತ್ತಾ ಬರುತ್ತಿದ್ದು, ಆಸ್ತಿಕ- ನಾಸ್ತಿಕರೆನ್ನದೆ ಎಲ್ಲರನ್ನೂ ಸೆಳೆಯುತ್ತಿರುವುದನ್ನು ಕಾಣಬಹುದಾಗಿದೆ.

ಮತ್ತೆ ಶಬರಿಮಲೆ ಸುದ್ದಿ, ಮಹಿಳೆ ಪ್ರವೇಶ ಅರ್ಜಿ ಸಾಂವಿಧಾನಿಕ ಪೀಠಕ್ಕೆ

ಬೆಟ್ಟ-ಗುಡ್ಡಗಳ ಹಸಿರು ಸುಂದರ ಪರಿಸರದಲ್ಲಿ ನೆಲೆ ನಿಂತಿರುವ ಚಿಕ್ಕದೇವಮ್ಮ ತಾಯಿ ಸುತ್ತಮುತ್ತಲ ಊರಿನವರ ಆರಾಧ್ಯ ದೇವತೆಯೂ ಹೌದು. ಹೀಗಾಗಿ ಆಗಾಗ ಬೆಟ್ಟವನ್ನೇರಿ ಬರುವ ಭಕ್ತರು ದೇವಿಯ ದರ್ಶನ ಪಡೆದು, ಹಿಂತಿರುಗುತ್ತಾರೆ. ಮಂಗಳವಾರ ಮತ್ತು ಶುಕ್ರವಾರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದನ್ನು ಕಾಣಬಹುದು.

Do you know the holy place of Chikkadevamma tayi

ಚಾಮುಂಡೇಶ್ವರಿಯನ್ನು ಹೇಗೆ ಪೂಜಿಸುತ್ತಾರೋ ಹಾಗೆಯೇ ಹಿಂದೆ ಯದುವಂಶದ ಮಹಾರಾಜರು ಚಿಕ್ಕಮ್ಮದೇವಿಯನ್ನು ಪೂಜಿಸುತ್ತಿದ್ದರಂತೆ. ಪರಿವಾರ ಸಹಿತ ಬಂದು ದೇವಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದರು.

ರಾಕ್ಷಸರು ಅಟ್ಟಹಾಸಗೈಯ್ಯುತ್ತಾ ದೇವತೆಗಳಿಗೆ ಉಪಟಳ ನೀಡುತ್ತಿದ್ದಾಗ ಚಿಕ್ಕದೇವಮ್ಮ ತಾಯಿಯು ಅವತಾರ ತಾಳಿ ಬಂದು ರಾಕ್ಷಸರನ್ನು ಸಂಹರಿಸಿದಳಂತೆ. ದೇವಿಯ ದರ್ಶನ ಮಾಡಿ, ಪ್ರಾರ್ಥಿಸಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬ ನಂಬಿಕೆ ಜನತೆಯಲ್ಲಿದೆ. ಹೀಗಾಗಿಯೇ ಜನ ಕಷ್ಟ ಬಂದಾಗ ತಾಯಿಗೆ ಹರಕೆ ಹೊತ್ತು, ಚಿಕ್ಕದೇವಮ್ಮದೇವಿಯ ಸನ್ನಿಧಿಗೆ ಆಗಮಿಸಿ ಹರಕೆ ತೀರಿಸುತ್ತಾರೆ.

ಚಾಮುಂಡಿ ಬೆಟ್ಟದ ಕಪ್ಪು ನಂದಿಯು ಬಿಳಿಯಾಗಿದ್ದು ಹೇಗೆ?

ಇತ್ತೀಚಿನ ವರ್ಷಗಳಲ್ಲಿ ಇಲ್ಲಿಗೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಮಂಗಳವಾರ, ಶುಕ್ರವಾರ, ಅಮಾವಾಸ್ಯೆ ದಿನಗಳಲ್ಲದೆ, ವಾರದ ಏಳು ದಿನವೂ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಮೊದಲೆಲ್ಲ ಇಲ್ಲಿ ಪ್ರಾಣಿ ಬಲಿ ನೀಡಲಾಗುತ್ತಿತ್ತು. ಈಗ ಪ್ರಾಣಿ ದಯಾ ಸಂಘದ ಆಕ್ಷೇಪದ ಮೇರೆಗೆ ನಿಲ್ಲಿಸಲಾಗಿದೆ.

Do you know the holy place of Chikkadevamma tayi

ಹಿರಿಯರು ಹೇಳುವ ಪ್ರಕಾರ ಚಿಕ್ಕದೇವಮ್ಮತಾಯಿ ಬೆಟ್ಟಕ್ಕೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೂ ಸುರಂಗ ಮಾರ್ಗವಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸುರಂಗ ಮಾರ್ಗ ಈಗಲೂ ಕಾಣಿಸುತ್ತಿದ್ದು, ಗಿಡ-ಗಂಟಿಗಳು ಆವರಿಸಿ ಮುಚ್ಚಿ ಹೋಗಿದೆ. ಈ ಸುರಂಗದಲ್ಲಿ ಸರ್ಪ ನೆಲೆ ನಿಂತಿದೆ ಎಂದು ಹೇಳಲಾಗುತ್ತಿದ್ದು, ಆ ಕಡೆ ಹೋಗಲು ಯಾರೂ ಪ್ರಯತ್ನ ಮಾಡಿಲ್ಲ.

ಚಿಕ್ಕದೇವಮ್ಮತಾಯಿ ಕ್ಷೇತ್ರ ಪವಿತ್ರ ತಾಣವಾಗಿದ್ದು, ಇದು ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಇಲ್ಲಿ ಒಂದಷ್ಟು ಮೂಲ ಸೌಕರ್ಯಗಳನ್ನು ಒದಗಿಸಿದ್ದೇ ಆದರೆ ಭಕ್ತರ ಮತ್ತು ಪ್ರವಾಸಿಗರ ನೆಚ್ಚಿನ ತಾಣ ಆಗುವುದರಲ್ಲಿ ಎರಡು ಮಾತಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Do you know the holy place of Chikkadevamma tayi, who is believe to be Chamudeshwari Devi sister. Temple of Chikkadevamma tayi in HD Kote taluk, Chikkadevara betta. On Friday, Tuesday and Amavasya thousands of people visit here.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ