ಮೈಸೂರಿನಲ್ಲಿ ವೈದ್ಯರ ಮುಷ್ಕರ: 175 ಖಾಸಗಿ ಆಸ್ಪತ್ರೆ ಬಂದ್

Posted By:
Subscribe to Oneindia Kannada

ಮೈಸೂರು, ಜನವರಿ 2 : ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ವಿರೋಧಿಸಿ ದೇಶಾದ್ಯಂತ ಇಂದು ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದ್ದು ಮೈಸೂರಿನಲ್ಲೂ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದೆ.

ಕೇಂದ್ರದ ವಿರುದ್ಧ ಸಿಡಿದೆದ್ದ ವೈದ್ಯರು: ದೇಶಾದ್ಯಂತ ಓಪಿಡಿ ಸೇವೆ ಸ್ಥಗಿತ

ಮೈಸೂರಿನ 175 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಿವೆ. ಈ ಕುರಿತು ಮಾಹಿತಿ ನೀಡಿರುವ ಮೈಸೂರು ಐಎಂಎ ಅಧ್ಯಕ್ಷ ವಿಶ್ವೇಶ್ವರ್, ಈಗಾಗಲೇ ಮೈಸೂರಿನಾದ್ಯಂತ ಎಲ್ಲಾ ವೈದ್ಯರಿಗೂ ಮಾಹಿತಿ ನೀಡಲಾಗಿದೆ. ಸಂಜೆ 4ಕ್ಕೆ ಸಂಸದರು ಹಾಗೂ ಡಿಸಿಗೆ ಮನವಿ ಮಾಡುತ್ತೇವೆ. ಬಂದ್ ಬಗ್ಗೆ ಕೆಲವರಿಗೆ ಮಾಹಿತಿ ಲಭ್ಯವಾಗಿಲ್ಲ. ಹಂತ-ಹಂತವಾಗಿ ಕರೆ ಮಾಡಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

Doctors goes strike: OPD service closed in Mysuru

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೆಲವಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರೋಗಿಗಳು ಎಂದಿನಂತೆ ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಒಪಿಡಿ ಬಂದ್ ನಿಂದ ರೋಗಿಗಳಲ್ಲಿ ಗೊಂದಲ ಉಂಟಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲೂ ರೋಗಿಗಳ ಸಂಖ್ಯೆ ಕ್ಷೀಣಿಸಿದೆ ಎನ್ನಲಾಗುತ್ತಿದೆ.

ಮುಷ್ಕರ: ಬೆಂಗಳೂರಿನಲ್ಲಿ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯ

ಖಾಸಗಿ ಆಸ್ಪತ್ರೆಗಳ ಬಂದ್ ಹಿನ್ನೆಲೆ ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೆವು. ಆದರೆ ಪ್ರತಿದಿನಕ್ಕಿಂತ ಇಂದು ಹೊರ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಬಹುಶಃ ಸರ್ಕಾರಿ ಆಸ್ಪತ್ರೆಗಳಲ್ಲೂ ಒಪಿಡಿ ಇರಲ್ಲ ಎಂದು ರೋಗಿಗಳಲ್ಲಿ ಗೊಂದಲ ಸೃಷ್ಟಿಯಾಗಿರಬಹುದು ಎಂದು ವೈದ್ಯಕೀಯ ಅಧೀಕ್ಷಕ ಡಾ.ಚಂದ್ರಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Opposing the formation of the National Medical Council, private hospitals in the country have called for Out patient Department service closure on Tuesday. Private Hospital OPD service remained closed in Mysuru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ