ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿ-ಮಗ ಆತ್ಮಹತ್ಯೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 06: : ಗಂಡನ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳ ತಾಳಲಾರದ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಮಹದೇವಪುರದಲ್ಲಿ ನಡೆದಿದೆ.

ಇಪ್ಪತ್ತೇಳು ವರ್ಷದ ಗೌರಮ್ಮ ಎಂಬಾಕೆಯೇ ತನ್ನ ಒಂದೂವರೆ ವರ್ಷದ ಮಗು ನಿಯಾಲ್ ನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ದುರ್ದೈವಿ. ಈಕೆ ಕೆ.ಆರ್.ಪೇಟೆ ತಾಲೂಕಿನ ಸೋಮನಾಥಪುರದ ನಿವಾಸಿಯಾಗಿದ್ದ ಈಕೆ ಲೋಹಿತ್ ಎಂಬಾತನನ್ನು ಮದುವೆಯಾಗಿದ್ದರು. ಮಾಲೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಹಿತ್ ವರದಕ್ಷಿಣೆ ಪಡೆದುಕೊಂಡು ಮದುವೆಯಾಗಿದ್ದರೂ ವರದಕ್ಷಿಣೆ ತರುವಂತೆ ಹೆಂಡತಿ ಗೌರಮ್ಮನಿಗೆ ಕಿರುಕುಳವನ್ನು ನಿರಂತರವಾಗಿ ನೀಡುತ್ತಿದ್ದನು ಎನ್ನಲಾಗಿದೆ.

ಬೆಳಗಾವಿ: ವರದಕ್ಷಿಣೆಗಾಗಿ ಸೀಮೆಎಣ್ಣೆ ಸುರಿದು ಗೃಹಿಣಿ ಕೊಲೆಗೆ ಯತ್ನಬೆಳಗಾವಿ: ವರದಕ್ಷಿಣೆಗಾಗಿ ಸೀಮೆಎಣ್ಣೆ ಸುರಿದು ಗೃಹಿಣಿ ಕೊಲೆಗೆ ಯತ್ನ

ಇದರಿಂದ ನೊಂದ ಗೌರಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪುತ್ರನೊಂದಿಗೆ ಸ್ನಾನದ ಮನೆಗೆ ತೆರಳಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Dowry harassment: Mother and son commit suicide in Mysuru

ಮೈದುನ ಅರುಣ್ ಅವರು ಮನೆಗೆ ಬಂದಾಗ ಗೌರಮ್ಮ ಮತ್ತು ನಿಹಾಲ್ ಮೃತಪಟ್ಟಿರುವುದನ್ನು ಕಂಡು ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಜರು ನಡೆಸಿ ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

English summary
A mother and some committed suicide after their family harassed them for dowry. The incident took place in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X