'ಕೇಂದ್ರದ ಬರ ಅನುದಾನ ನಯಾಪೈಸೆ ಉಳಿಸಿಕೊಂಡಿಲ್ಲ'

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಜನವರಿ. 24 : ಬರ ಪರಿಹಾರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ಬಿಡುಗಡೆ ಮಾಡಿರುವ ಅನುದಾನವನ್ನು ಬಳಕೆ ಮಾಡಿಕೊಂಡಿಲ್ಲ ಎಂಬ ವಿರೋಧ ಪಕ್ಷದ ಮುಖಂಡರ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಳ್ಳಿ ಹಾಕಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ಕೇಂದ್ರ ಬಿಡುಗಡೆ ಮಾಡಿರುವ ಅನುದಾನದಲ್ಲಿ ಒಂದು ರೂಪಾಯಿ ಕೂಡ ಬಾಕಿ ಉಳಿಸಿಕೊಂಡಿಲ್ಲ. ಬರ ಪರಿಹಾರ ಕಾಮಗಾರಿಗಳಿಗೆ ಮತ್ತು ರೈತರ ಬ್ಯಾಂಕ್ ಖಾತೆಗಳಿಗೆ ಹಣ ತುಂಬಲು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂದರು.

drought fund sanctioned by central government fully utilised says cm siddaramaiah

ಕೇಂದ್ರದ ಮೇಲೆ ಸುಮ್ಮನೆ ಆರೋಪ ಮಾಡುತ್ತಿಲ್ಲ. ಮನವಿ ಕೊಟ್ಟು ಮೂರು ತಿಂಗಳಾದರೂ ಕೇಂದ್ರದಿಂದ ನಯಾಪೈಸೆ ಅನುದಾನ ಬಂದಿಲ್ಲ. ನೆರವು ನೀಡುವಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದು 15 ದಿನಗಳಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಇದಕ್ಕಿಂತ ಇನ್ನೇನು ಬೇಕು.

ಈವರೆಗೂ ಒಂದು ರೂಪಾಯಿಯನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂದರೆ ವಿರೋಧ ಪಕ್ಷದ ನಾಯಕರು ಇಲ್ಲಿ ಮಾತನಾಡುವ ಬದಲು ಪ್ರಧಾನಿಯವರ ಜೊತೆ ಕುಳಿತು ಹಣ ಬಿಡುಗಡೆ ಮಾಡಿಸುವುದು ಒಳ್ಳೆಯದು ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Drought fund sanctioned by central government fully utilised, said chief minister of karnataka siddaramaiah on Tuesday at Mysuru.
Please Wait while comments are loading...