ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡು ಉಪಚುನಾವಣಾ: ಅಕ್ರಮ ಮದ್ಯ ವಶ

ತಾಲೂಕಿನ ಆಯಕಟ್ಟಿನ ಸ್ಥಳಗಳಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿಗಳು ಮಾರ್ಚ್.17 ರಿಂದ 21 ರವರೆಗೆ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 23: ಏಪ್ರಿಲ್ 9 ಭಾನುವಾರದಂದು ನಡೆಯಲಿರುವ ನಂಜನಗೂಡು ವಿಧಾನಸಭಾ ಉಪಚುನಾವಣೆಯನ್ನು ಶಾಂತ ಹಾಗೂ ಮುಕ್ತ ರೀತಿಯಲ್ಲಿ ನಡೆಸುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಾಲೂಕಿನ ಆಯಕಟ್ಟಿನ ಸ್ಥಳಗಳಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿಗಳು ಮಾರ್ಚ್.17 ರಿಂದ 21 ರವರೆಗೆ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ.[ಉಪಚುನಾವಣೆಗೆ ಹೊಸ ವಿವಿಪಿಎಟಿ ಮತ ಯಂತ್ರಗಳು]

EC takes strict action against illegality

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಿರುವ ಪೊಲೀಸರು ಅವರಿಂದ ಒಟ್ಟು 48.360 ಲೀ ಮದ್ಯ, 1 ಹೀರೊಹೊಂಡಾ ಫ್ಯಾಷನ್ ಪ್ರೋ ಮತ್ತು 1 ಟಿವಿಎಸ್ ಮೊಪೆಡ್ ನ್ನು ವಶಪಡಿಸಿಕೊಂಡಿದ್ದಾರೆ.[ಉಪಚುನಾವಣೆ: ಎರಡು ನಾಮಪತ್ರ ತಿರಸ್ಕೃತ]

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅಬಕಾರಿ ಸನ್ನದುಗಳಲ್ಲಿ ನಿಯಮ ಉಲ್ಲಂಘನೆಗಾಗಿ ಹುಲ್ಲಹಳ್ಳಿ ಗ್ರಾಮದ ಶಿವ ವೈನ್ಸ್ ಮತ್ತು ಹೆಡತಲೆ ಗ್ರಾಮದಲ್ಲಿರುವ ಎಂ.ಎಸ್.ಐ.ಎಲ್ ಸನ್ನದನ್ನು ಮಾ.22 ರಿಂದ ಏ.10ರವರೆಗೆ ಜಿಲ್ಲಾಧಿಕಾರಿ ಡಿ.ರಂದೀಪ್ ಅಮಾನತುಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರಾಗಿದ್ದ ಶ್ರಿನಿವಾಸ್ ಪ್ರಸಾದ್ ಬಿಜೆಪಿ ಪಕ್ಷಕ್ಕೆ ಸೇರಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ನಿಂದ ಕಳಲೆ ಕೇಶವಮೂರ್ತಿ, ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ. ಏಪ್ರಿಲ್ 13 ಗುರುವಾರದಂದು ಫಲಿತಾಂಶ ಹೊರಬೀಳಲಿದೆ.

English summary
Election Commission has taken strict precautions to avoid election illegality in Nanjangud bypoll. Till now 5 cases have registerd regarding illegality in the area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X