• search
For mysuru Updates
Allow Notification  

  ಮೈಸೂರಿನಲ್ಲಿ ಶುರುವಾಗಿದೆ ಚುನಾವಣಾ ಬೆಟ್ಟಿಂಗ್ ಭರಾಟೆ

  By ಯಶಸ್ವಿನಿ ಎಂ.ಕೆ
  |

  ಮೈಸೂರು, ಮೇ 14 : ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆ ಮತದಾನ ಮುಗಿದಿವೆ, ಈಗೇನಿದ್ದರು ಗೆಲುವು ಸೋಲಿನ ಲೆಕ್ಕಾಚಾರವಷ್ಟೆ. ಇದೇ ಸಮಯದ 'ಸದುಪಯೋಗ?!' ಪಡೆದುಕೊಳ್ಳಲು ಮುಂದಾಗಿದ್ದಾರೆ ಜೂಜುಕೋರರು.

  ಹೌದು, ರಾಜ್ಯದ ಹಲವೆಡೆ ಈಗ ಚುನಾವಣಾ ಫಲಿತಾಂಶದ ಮೇಲೆ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ ಅದರಲ್ಲಿಯೂ ಮೈಸೂರಿನಲ್ಲಂತೂ ಬೆಟ್ಟಿಂಗ್ ಬಲು ಜೋರು. ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಹಾಗೂ ವಿರುದ್ಧ ಬೆಟ್ಟಿಂಗ್ ದಂಧೆ ಎಗ್ಗಿಲ್ಲದೆ ಸಾಗುತ್ತಿದೆ.

  ಉಡುಪಿ, ಬೈಂದೂರಿನಲ್ಲಿ ಬೆಟ್ಟಿಂಗ್ ಜೋರು: ಕೃಷ್ಣನಗರಿಯಲ್ಲಿ ಗೆಲ್ಲೋರಾರು ?

  ಚುನಾವಣೆ ಘೋಷಣೆಯಾದ ಕಳೆದ ಒಂದೂವರೆ ತಿಂಗಳಿನಿಂದಲೂ ಆಯಾ ರಾಜಕೀಯ ಪಕ್ಷಗಳ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದ ಕಾರ್ಯಕರ್ತರು ಚುನಾವಣೆ ಮುಗಿಯುತ್ತಿದ್ದಂತೆ ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಹಣ, ನಿವೇಶನ, ಕುರಿ, ಮೇಕೆ ಮತ್ತಿತರ ವಸ್ತುಗಳನ್ನು ಪಣಕ್ಕಿಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

  ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ಕೆಲ ವಿಧಾನಸಭಾ ಕ್ಷೇತ್ರಗಳು ಜಿದ್ದಾಜಿದ್ದಿನಿಂದ ಕೂಡಿವೆ. ಹೀಗಾಗಿ ಮೇ 15ರ ಫಲಿತಾಂಶದತ್ತ ಎಲ್ಲರೂ ಚಿತ್ತ ಹರಿಸಿದ್ದಾರೆ. ಈ ನಡುವೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನರು ಚುನಾವಣೆಯಲ್ಲಿ ಸ್ಪರ್ಧಿಸಿರುವ ತಮ್ಮ, ತಮ್ಮ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸದೊಂದಿಗೆ ಲಕ್ಷಾಂತರ ರೂ. ಮೌಲ್ಯದ ನಿವೇಶನ ಹಾಗೂ ಹಣವನ್ನು ಪಣಕ್ಕಿಟ್ಟಿದ್ದಾರೆ.

  Election and voting ends : Betting begins in Mysuru

  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್‌
  ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಘೋಷಿಸಲ್ಪಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹಾಗೂ ಜನತಾದಳ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ನಡುವೆ ಏರ್ಪಟ್ಟಿರುವ ಸ್ಪರ್ಧೆ ಇಡೀ ರಾಜಕೀಯ ರಂಗದಲ್ಲಿ ಕುತೂಹಲ ಮೂಡಿಸಿದ್ದು, ಇಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆಯುತ್ತಿದೆ.

  ಜ್ಯೋತಿಷಿಗಳ ಭವಿಷ್ಯ : ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ, ಬಿಜೆಪಿಗೆ ಲಾಭ

  ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡ ಅವರ ಪರವಾಗಿ ಕ್ಷೇತ್ರದ ಜನರು ಅತಿ ಹೆಚ್ಚು ಹಣವನ್ನು ಬೆಟ್ಟಿಂಗ್ ರೂಪದಲ್ಲಿ ತೊಡಗಿಸುತ್ತಿದ್ದಾರೆ. ಆದರೆ, ಜಿಟಿಡಿ ಅವರ ಕಡೆಯವರೂ ಸಹ ತಾವೇನೂ ಕಡಿಮೆ ಇಲ್ಲ ಎಂದು ತಮ್ಮ ನಾಯಕನ ಪರ ಬೆಟ್ಟಿಂಗ್ ಕಟ್ಟುತ್ತಿದ್ದಾರೆ.

  ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಗೆ ಬರುವ ಹಿನಕಲ್, ಇಲವಾಲ, ಉದ್ಬೂರು, ಬೋಗಾದಿ, ಹೊಸಹುಂಡಿ, ರಾಮಕೃಷ್ಣನಗರ, ಮತ್ತಿತರ ಪ್ರದೇಶಗಳಲ್ಲದೆ, ಕ್ಷೇತ್ರವನ್ನು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಕೂಡ ಸಿದ್ದರಾಮಯ್ಯ ಹಾಗೂ ಜಿಟಿಡಿ ಅವರ ಪರ ಬೆಟ್ಟಿಂಗ್ ಹವಾ ಮುಂದುವರಿದಿದೆ.

  ಉಳಿದಂತೆ ಸಿದ್ದರಾಮಯ್ಯ ಮತ್ತು ಶ್ರೀರಾಮುಲು ಮುಖಾಮುಖಿ ಆಗಿರುವ ಬಾದಾಮಿ ಕ್ಷೇತ್ರದ ಬಗ್ಗೆ ಕೂಡ ಮೈಸೂರಿನಲ್ಲಿ ಬೆಟ್ಟಿಂಗ್‌ ನಡೆಯುತ್ತಿದೆ. ಇದು ಮಾತ್ರವಲ್ಲದೆ ಮೈಸೂರು ನಗರ ವ್ಯಾಪ್ತಿಯ ಜಿದ್ದಾಜಿದ್ದಿ ಕ್ಷೇತ್ರವೆಂದು ಹೆಸರು ವಾಸಿಯಾಗಿರುವ ಕೃಷ್ಣರಾಜ ಕ್ಷೇತ್ರದಲ್ಲಿಯೂ ಕೂಡ ಬೆಟ್ಟಿಂಗ್ ವ್ಯಾಪಕ ವಾಗಿ ನಡೆಯುತ್ತಿದೆ. ಮಾಜಿ ಸಚಿವ ಎಸ್.ಎ.ರಾಮದಾಸ್ ಹಾಗೂ ಹಾಲಿ ಶಾಸಕ ಎಂ.ಕೆ. ಸೋಮಶೇಖರ್ ಅವರ ಪರ ಹಾಗೂ ವಿರುದ್ಧ ಲಕ್ಷಾಂತರ ರೂ. ಹಣವನ್ನು ಅಭಿಮಾನಿಗಳು ಪಣಕ್ಕಿಟ್ಟಿದ್ದು, ಫಲಿತಾಂಶಕ್ಕಾಗಿ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

  ಇನ್ನು ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಪರ ಹೆಚ್ಚಿನ ಬೆಟ್ಟಿಂಗ್ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್‌ ಹಾಗೂ ಬಿಜೆಪಿ ಅಭ್ಯರ್ಥಿ ಸಂದೇಶ ಸ್ವಾಮಿ ಪರ ಕೂಡ ಹಲವಾರು ಮಂದಿ ಪಣ ಕಟ್ಟಿದ್ದಾರೆ.

  ಮಾಜಿ ಸಚಿವ ಎ.ಎಚ್.ವಿಶ್ವನಾಥ್ ಅವರು ಕಣಕ್ಕಿಳಿದಿರುವ ಕಾರಣ ಹುಣಸೂರು ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಹಾಗೂ ವಿಶ್ವನಾಥ್ ಪರ ಅತಿ ಹೆಚ್ಚು ಬೆಟ್ಟಿಂಗ್ ದಂಧೆ ನಡೆಯುತ್ತಿದೆ. ಹುಣಸೂರಿನ ಮಂಜುನಾಥ್ ಅಭಿಮಾನಿಯೊಬ್ಬರು ತಮ್ಮ ಎರಡು ಎಕರೆ ಜಮೀನನ್ನು ಮಂಜುನಾಥ್ ಪರ ಪಣಕ್ಕಿಟ್ಟಿರುವ ಬಗ್ಗೆ ತಿಳಿದು ಬಂದಿದೆ. ವಿಶ್ವನಾಥ್ ಪರ ಕೂಡ ಸಾಕಷ್ಟು ಮಂದಿ ಹಣ ಹಾಗೂ ಜಮೀನನ್ನು ಪಣಕ್ಕಿಟ್ಟಿದ್ದಾರೆ.

  ಉಳಿದಂತೆ ಕೆಆರ್.ನಗರ, ಎಚ್.ಡಿ.ಕೋಟೆ, ನಂಜನಗೂಡು ಕ್ಷೇತ್ರಗಳಲಿ ಸಾ.ರಾ.ಮಹೇಶ್, ಅನಿಲ್‌ ಚಿಕ್ಕಮಾದು, ಕಳಲೆ ಎನ್.ಕೇಶವಮೂರ್ತಿ ಪರ ಅತಿ ಹೆಚ್ಚಿನ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಒಟ್ಟಾರೆ ಪ್ರಕಟವಾಗಲಿರುವ ಫಲಿತಾಂಶದಿಂದ ಯಾರು ಏನನ್ನು ಕಳೆದುಕೊಳ್ಳಲಿದ್ದಾರೆ ಎಂಬುದು ತಿಳಿದು ಬರಲಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ಮೈಸೂರು ಸುದ್ದಿಗಳುView All

  English summary
  Karnataka assembly election over. In Mysuru betting begun for election result. people betting for their favorite candidates.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more