ಸೆ.22 ರಿಂದ 24ರವರೆಗೆ ರೈತ ದಸರಾ, ಕಾರ್ಯಕ್ರಮ ಪಟ್ಟಿ ಬಿಡುಗಡೆ

Posted By:
Subscribe to Oneindia Kannada

ಮೈಸೂರು, ಆಗಸ್ಟ್ 28: ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ರೈತ ದಸರಾ ಕಾರ್ಯಕ್ರಮಗಳ ಪಟ್ಟಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ ಸೋಮವಾರ ಬಿಡುಗಡೆ ಮಾಡಿದರು.

ಸೆ.22 ರಿಂದ 24ರವರೆಗೆ ರೈತ ದಸರಾ ನಡೆಯಲಿದ್ದು, ಸೆ.22 ರಂದು ರೈತರ ದಸರಾ ಮೆರವಣಿಗೆಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಜಿಲ್ಲಾ ಉಸ್ತುವಾರಿ ಸಚಿವ ಚಾಲನೆ ನೀಡಲಿದ್ದಾರೆ.

Farmer dasara program list released by Mysuru DC

ಮೆರವಣಿಗೆಯಲ್ಲಿ ಎತ್ತಿನಗಾಡಿಗಳು, ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ. ನಗರದ ಜೆ.ಕೆ. ಮೈದಾನದಲ್ಲಿ ರೈತ ದಸರಾ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಕೃಷಿ ಸಚಿವರು ರೈತ ದಸರಾ ಉದ್ಘಾಟಿಸಲಿದ್ದಾರೆ ಎಂದರು.

ಇದೇ ವೇಳೆ ಜೆ.ಕೆ.ಮೈದಾನದಲ್ಲಿ ರೈತರಿಗೆ ಉಪಯುಕ್ತವಾದ ವಸ್ತು ಪ್ರದರ್ಶನವನ್ನು ಆಯೋಜಿಸಲಾಗುವುದು. ಸೆ.23 ರಂದು ರೈತರು ಹಾಗೂ ರೈತ ಮಹಿಳೆಯರಿಗಾಗಿ ಕ್ರೀಡಾಕೂಟ, 24 ರಂದು ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದ್ರಪ್ಪ ಮಾಹಿತಿ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
On the occasion of Mysuru dasara farmer dasara between September 22nd to 24th. Program list announced by Mysuru DC on Monday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ