ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ?

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಮಾರ್ಚ್ 18: ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿ ಎಸ್ ಸೇರಲಿದ್ದಾರಾ? ಹಾಗೊಂದು ಸುದ್ದಿ ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್ ಜೆಡಿ ಎಸ್ ನನ್ನನ್ನು ಆಹ್ವಾನಿಸುತ್ತಿರುವುದು ನಿಜ, ಹಾಗಂತ ಕಾಂಗ್ರೆಸ್ ನನ್ನನ್ನು ಕಡೆಗಣಿಸಿಲ್ಲ. ಈ ವದಂತಿ ಸುಳ್ಳು ಎಂದಿದ್ದಾರೆ. [ಒಬ್ಬರ ಹಿಂದೊಬ್ಬರಂತೆ ಕಾಂಗ್ರೆಸ್ ತೊರೆಯುತ್ತಿರುವವರು]

Former Mp H Vishwanath Likely to join JDS

ಆದರೂ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿದ್ದಾರೆಂಬ ಕಾರಣಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಜೆ.ಡಿ.ಎಸ್ ಸೇರುತ್ತಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಕಾರಣಕ್ಕೆಂದೇ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದೂ ಹೇಳಲಾಗುತ್ತಿದೆ. [ನನಗೆ ನೋಟೀಸ್ ನೀಡುವ ಅಧಿಕಾರ ನಿಮಗೆ ಕೊಟ್ಟವರ್ಯಾರು?: ಎಚ್.ವಿಶ್ವನಾಥ್ ಆಕ್ರೋಶ]

ಶಾಸಕ ಸಾ ರಾ ಮಹೇಶ್, ಸಂಸದ ಪುಟ್ಟರಾಜು ನೇತೃತ್ವದಲ್ಲಿ ವಿಶ್ವನಾಥ್ ರನ್ನು ತೆನೆ ಪಕ್ಷಕ್ಕೆ ಕರೆತರಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Former MP H Vishwanath likely to join JDS, sources said. According to source his disoppointment towards party leaders might be the main reason for such decision.
Please Wait while comments are loading...