ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ, ನೇಣಿಗೆ ರೈತ ಶರಣು

By: ಮೈಸೂರು ಪ್ರತಿನಿಧಿ
Subscribe to Oneindia Kannada

ಕೆ.ಆರ್.ಪೇಟೆ, ಏಪ್ರಿಲ್ 15 : ಡೆಂಗ್ಯೂ ಜ್ವರದಿಂದ ಬಳಸುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ತಾಲೂಕಿನ ಮೆಳ್ಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೆಳ್ಳಹಳ್ಳಿ ಗ್ರಾಮದ ಶಿವಣ್ಣ ಮತ್ತು ಸುಧಾಮಣಿ ದಂಪತಿಗಳ ಪುತ್ರಿ ಎಂ.ಎಸ್.ಬಿಂದು(11) ಮೃತಪಟ್ಟ ಬಾಲಕಿ.

ಪಟ್ಟಣದ ದಕ್ಷಿಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಬಾಲಕಿಯು ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಈಕೆಯನ್ನು ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Girl dies of dengue, farmer commits suicide in KR Pet

ರೈತ ನೇಣಿಗೆ ಶರಣು : ಸಾಲದ ಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಚಿಕ್ಕಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಕ್ಕೇಗೌಡ ಅವರ ಮಗ ಲಕ್ಷ್ಮಣ್(58) ಮೃತಪಟ್ಟಿರುವ ರೈತ. ಚಿಕ್ಕಸೋಮನಹಳ್ಳಿ ಎಲ್ಲೆಯಲ್ಲಿ 1 ಎಕರೆ 9 ಗುಂಟೆ ಜಮೀನು ಹೊಂದಿದ್ದಾರೆ. ಬೋರ್‌ವೆಲ್ ಕೊರೆಸಲು ಹಾಗೂ ಬೆಳೆ ಸಾಲವಾಗಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ 1.25 ಲಕ್ಷ ರೂ, ಜೊತೆಗೆ 2 ಲಕ್ಷ ರೂ ಕೈಸಾಲ ಸಾಲ ಮಾಡಿದ್ದರು.

ಬರಗಾಲದ ಹಿನ್ನೆಲೆಯಲ್ಲಿ ಬೋರ್‌ವೆಲ್‌ನಲ್ಲಿ ಅಂತರ್ಜಲ ಕುಸಿದಿದ್ದರಿಂದ ಬೇಸಾಯ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ಜವರಮ್ಮ ಪಟ್ಟಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Eleven year old girl died in Mysuru. The girl from KR Pet was suffering from dengue. In another case, a farmer has committed suicide by hanging. He had taken loan to drill borewell. But, due to drought groundwater level had gone down. Unable to pay the loan he took extreme step.
Please Wait while comments are loading...