ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಿಡ ನೆಟ್ಟು ಹಣ ಪಡೆಯಿರಿ, ಆರಂಭವಾಗಲಿದೆ ಹಸಿರು ಕರ್ನಾಟಕ ಯೋಜನೆ

By Yashaswini
|
Google Oneindia Kannada News

ಮೈಸೂರು, ಆಗಸ್ಟ್.14: ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ವನ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಹಸಿರು ಕರ್ನಾಟಕ ಯೋಜನೆಯನ್ನು ಆ.15ರಿಂದ 18ರವರೆಗೆ ಜಿಲ್ಲಾದ್ಯಂತ ಅನುಷ್ಠಾನಗೊಳಿಸಲಾಗುತ್ತದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.15ರಂದು ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಸ್ವಾತಂತ್ಯ ದಿನಾಚರಣೆ ಕಾರ್ಯಕ್ರಮದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಹಸಿರು ಕರ್ನಾಟಕ ಯೋಜನೆ'ಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಜಾಗತಿಕ ತಾಪಮಾನದ ವಿರುದ್ಧ ಯುದ್ಧ ಸಾರಿದ ಮಂಗಳೂರಿನ ಪುಟಾಣಿಗಳುಜಾಗತಿಕ ತಾಪಮಾನದ ವಿರುದ್ಧ ಯುದ್ಧ ಸಾರಿದ ಮಂಗಳೂರಿನ ಪುಟಾಣಿಗಳು

ಹಸಿರು ಕರ್ನಾಟಕ ಯೋಜನೆಗೆ ಅಗತ್ಯವಿರುವ ಸಸಿಗಳಿವೆ. ಈ ಕಾರ್ಯಕ್ರಮದ ಅಡಿಯಲ್ಲಿ ಸಣ್ಣಪುಟ್ಟ ಬೋಳು ಗುಡ್ಡಗಳು, ಗೋಮಾಳಗಳು, ಸರ್ಕಾರಿ ಜಮೀನುಗಳು, ಸರ್ಕಾರಿ ಇಲಾಖೆ ಕಚೇರಿ ಆವರಣ, ಶಾಲಾ-ಕಾಲೇಜು ಆವರಣ, ರೈತರ ಜಮೀನುಗಳು ಮತ್ತು ಹಂತ ಹಂತವಾಗಿ ಮನೆಗಳ ಅಂಗಳಗಳಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಹಸಿರು ಹೊದಿಕೆಯನ್ನು ಹೆಚ್ಚಿಸಲಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು, ಶಾಲಾ ಕಾಲೇಜುಗಳು, ಸಾರ್ವಜನಿಕರು, ಸ್ವಯಂ ಸೇವಕರು ಸಕ್ರಿಯವಾಗಿ ಭಾಗವಹಿಸಬೇಕಾಗಿದೆ ಎಂದರು.

Green Karnataka Project will be implemented from August 15

ಹಸಿರು ಕರ್ನಾಟಕ ಯೋಜನೆಯಡಿ ಈಗಾಗಲೇ ಮೈಸೂರು ನಗರದ ಎಲ್ಲ ಸರ್ಕಾರಿ ಕಚೇರಿಗಳ ಆವರಣದಲ್ಲಿ ಗಿಡ ನೆಡಲು 1 ಸಾವಿರ ಗಿಡಗಳ ಬೇಡಿಕೆ ಬಂದಿದೆ. ಜತೆಗೆ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಹೋಬಳಿ ಕಚೇರಿಗಳಿಂದಲೂ ಎಷ್ಟು ಗಿಡಬೇಕು ಎಂದು ತಿಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಬದುಕುಳಿದ ಪ್ರತಿ ಸಸಿಗೆ ಮೊದಲ ವರ್ಷ 30 ರೂ., ದ್ವಿತೀಯವರ್ಷ 30 ರೂ. ಹಾಗೂ ಮೂರನೇ ವರ್ಷ 40 ರೂ. ಸೇರಿ ಒಟ್ಟು 100 ರೂ.ಗಳನ್ನು ಪ್ರೋತ್ಸಾಹ ಧನವಾಗಿ ನೀಡುತ್ತಾ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಬೆಂಗಳೂರು: ಹಸಿರೀಕರಣ ಜಾಗೃತಿಗಾಗಿ ಮಾಧ್ವ ವಾಕಥಾನ್ಬೆಂಗಳೂರು: ಹಸಿರೀಕರಣ ಜಾಗೃತಿಗಾಗಿ ಮಾಧ್ವ ವಾಕಥಾನ್

15 ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಪಥ ಸಂಚಲನದಲ್ಲಿ ಮೊದಲ ಬಾರಿಗೆ ಇಲಾಖೆಯ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಅಧಿಕಾರಿಗಳ ತುಕಡಿಗಳು ಭಾಗವಹಿಸಿ, ಹಸಿರು ಕರ್ನಾಟಕ' ಯೋಜನೆಗೆ ಪ್ರಚಾರ ಮಾಡಲಿವೆ.

ಜೊತೆಗೆ ಶಾಲಾ ವಿದ್ಯಾರ್ಥಿಗಳು ಹಸಿರು ಕರ್ನಾಟಕ ನಾಮಫಲಕದೊಂದಿಗೆ ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಅಂದೇ ಮೈದಾನದಲ್ಲಿ ಹಸಿರು ಕರ್ನಾಟಕ' ಯೋಜನೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಸಹಿ ಸಂಗ್ರಹ ಅಭಿಯಾನ ನಡೆಯಲಿದೆ ಎಂದು ಹೇಳಿದರು.

English summary
Green Karnataka Project will be implemented throughout the district from August 15th to 18th. Minister GT Deve Gowda will launch the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X