ಎಚ್.ಡಿ.ಕೋಟೆ ಜೆಡಿಎಸ್ ಶಾಸಕ ಚಿಕ್ಕಮಾದು ಪರಿಚಯ

Posted By:
Subscribe to Oneindia Kannada

ಮೈಸೂರು, ನವೆಂಬರ್ 1 : ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶರಾಗಿದ್ದಾರೆ. ಹಲವು ನಾಯಕರು ಚಿಕ್ಕಮಾದು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಎಚ್.ಡಿ.ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

ಕೆ.ಆರ್.ನಗರ ತಾಲೂಕು ಹೊಸೂರು ಕಲ್ಲಲ್ಲಿ ಗ್ರಾಮದ ಚಿಕ್ಕಮಾದು ಅವರಿಗೆ 68 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಮೈಸೂರಿನ ಅರವಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ.

HD Kote JDS MLA Chikkamadu profile

ಚಿಕ್ಕಮಾದು ಅವರು ಹಿರಿಯ ಪತ್ನಿ ಜಯಮ್ಮ ಮತ್ತು ಕಿರಿಯ ಪತ್ನಿ ನಾಗಮ್ಮ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಹೆಚ್.ಡಿ.ಕೋಟೆ, ಹುಣಸೂರು, ಬಿಳಿಕೆರೆಯಲ್ಲಿರುವ ಅಚರ ಸಮುದಾಯ ಭವನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಂಜೆ ಹೊಸ ರಾಮೇನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಚಿಕ್ಕಮಾದು ಅವರ ಪರಿಚಯ

HD Kote JDS MLA Chikkamadu profile

* 1978 ರಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಬಿಳಿಕೆರೆ ಕ್ಷೇತ್ರದ ಜಿ.ಪಂ ಸದಸ್ಯರಾಗಿದ್ದರು
* 1991ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು
* 2007-08ರಲ್ಲಿ ಜೆಡಿಎಸ್‌ನಿಂದ ವಿಧಾನಪರಿಷತ್ ಸದಸ್ಯರಾದರು
* 2013 ರಲ್ಲಿ ಹೆಚ್.ಡಿ.ಕೋಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು
* ದಲಿತ ಸಂಘರ್ಷ ಸಮಿತಿ ಮುಂಚೂಣಿ ನಾಯಕರಾಗಿದ್ದರು
* ಡಿ.ದೇವರಾಜ ಅರಸು ಅವರ ವಿರುದ್ದ 1977-78ರಲ್ಲಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು
* ಹುಣಸೂರು ಕ್ಷೇತ್ರದ ಅಭ್ಯರ್ಥಿಯಾಗಲು ಯತ್ನಿಸಿದ ಅವರ ನಾಮಪತ್ರ ವಾಪಸ್ ತೆಗೆಸಲಾಗಿತ್ತು
* 1997-98 ರಲ್ಲಿ ಬಿಳಿಕೆರೆ ಕ್ಷೇತ್ರದಿಂದ ಜಿಲ್ಲಾ ಪರಿಷತ್ತಿಗೆ ಆಯ್ಕೆಯಾಗಿದ್ದರು
* 1991ರಲ್ಲಿ ಪ್ರಥಮ ಚುನಾವಣೆ ಎದುರಿಸಿದರು. ಹುಣಸೂರು ಉಪಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸಿದ್ದರು
* ಕಾಂಗ್ರೆಸ್ ನಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ವಿರುದ್ಧ ಜಯಗಳಿಸಿದ್ದರು
* ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಗೊಂಡರು
* ವಿಧಾನಪರಿಷತ್ ಸದಸ್ಯರಾಗಿಯೇ 2013ರ ಚುನಾವಣೆ ಎದುರಿಸಿದರು
* ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಣ್ಣ ವಿರುದ್ಧ ಭಾರೀ ಅಂತರದಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mysuru district HD Kote JDS MLA Chikkamadu died in private hospital Mysuru on November 1, 2017. Profile of Chikkamadu.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ