ದಸರಾ ಚಲನಚಿತ್ರೋತ್ಸವಕ್ಕೆ ಮೆರಗು ತಂದ ಸ್ಯಾಂಡಲ್ ವುಡ್ ಸ್ಟಾರ್ಸ್
ಮೈಸೂರು, ಅಕ್ಟೋಬರ್. 10 : ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವಕ್ಕೆ ಇಂದು ಬುಧವಾರ (ಅ.10) ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಕಲಾಮಂದಿರದಲ್ಲಿ ದೀಪ ಬೆಳಗುವ ಮೂಲಕ ದಸರಾ ಚಲನಚಿತ್ರೋತ್ಸವಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದರು. ಕಾರ್ಯಕ್ರಮದ ನಂತರ ಕಿರುಚಿತ್ರದ ಇತಿಹಾಸ, ಸ್ವರೂಪ ಮತ್ತು ಸಂವಿಧಾನ ಪ್ರಸ್ತುತತೆ ಇದರೊಟ್ಟಿಗೆ ಕಿರುಚಿತ್ರಗಳ ಮಹತ್ವ ಮತ್ತು ಮಾರುಕಟ್ಟೆ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು.
ಈ ವೇಳೆ ನಾಗತಿಹಳ್ಳಿ ಚಂದ್ರಶೇಖರ್, ಚೆನ್ನೇಗೌಡ, ವಿಜಯ ರಾಘವೇಂದ್ರ, ರಿಷಬ್ , ಹರ್ಷಿಕಾ ಶೆಟ್ಟಿ , ಪಾರುಲ್ ಯಾದವ್ , ಸತ್ಯಪ್ರಕಾಶ್ , ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ , ಗಡ್ಡಪ್ಪ, ಶ್ರೀರಂಗಪಟ್ಟಣದ ಶ್ರೀದೇವಿ ಚಿತ್ರಮಂದಿರದ ಮಾಲೀಕರಾದ ಲಕ್ಷ್ಮೀದೇವಮ್ಮ , ವಿತರಕರಾದ ರಾಜೇಂದ್ರ, ನಿರ್ಮಾಪಕ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಐವರು ಟಾಂಗಾ ಚಾಲಕರಿಗೆ ಸಮವಸ್ತ್ರ ಸಹ ವಿತರಿಸಲಾಯಿತು. ಹಾಗೆಯೇ ದಸರಾ ಚಲನಚಿತ್ರೋತ್ಸವ ಮಾಹಿತಿ ಪುಸ್ತಕ ಬಿಡುಗಡೆಗೊಳಿಸಲಾಯಿತು. ಸಚಿವರಾದ ಜಯಮಾಲಾ, ಜಿಟಿ ದೇವೇಗೌಡ , ಸಾರಾ ಮಹೇಶ್ , ಎನ್.ಮಹೇಶ್, ಶಾಸಕರಾದ ನಾಗೇಂದ್ರ, ನಿರಂಜನ್ , ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ್ , ನಜೀರ್ ಅಹಮದ್ , ಶ್ರೀಕಂಠೇಗೌಡ , ಅಶ್ವಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ನಂತರ ಕಲಾಮಂದಿರ ಆವರಣದಲ್ಲಿ ಸಿಎಂ ಒಂದು ಸುತ್ತು ಸುತ್ತಿ ಬಂದರು. ಇದೇ ವೇಳೆ ನೀಲ ಮೇಘ ಶ್ಯಾಮ , ಕಾಣದ ಕಡಲಿಗೆ ಸೇರಿದಂತೆ ದಶಕದ ಹಿಂದಿನ ಹಳೆಯ ಗೀತೆಗಳು ಕಾರ್ಯಕ್ರಮದಲ್ಲಿ ಮೂಡಿ ಬಂದಿದ್ದು , ಯುವ ಸಮೂಹ ಹರ್ಷೋದ್ಗಾರದಿಂದ ಚಪ್ಪಾಳೆ ಹಾಕಿ ಸಂಭ್ರಮಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications