ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 16 : ಮೈಸೂರು ನಗರದಲ್ಲಿ ಕಳೆದೆರಡು ದಿನಗಳಿಂದ ಮಳೆಯ ರುದ್ರ ನರ್ತನ ಶುರುವಿಟ್ಟುಕೊಂಡಿದೆ. ಇತ್ತ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಅರ್ಭಟ ಮುಂದುವರಿಕೆ ಬೆಂಗಳೂರಿನಲ್ಲಿ ಇಂದು, ನಾಳೆ ಮಳೆಯ ಅರ್ಭಟ ಮುಂದುವರಿಕೆ

ನಗರದ ಪ್ರಮುಖ ರಸ್ತೆಯಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕಳೆದ ಸಂಜೆಯಿಂದ ಆರಂಭವಾಗಿ ರಾತ್ರಿಯಿಡೀ ಧಾರಾಕಾರವಾಗಿ ಮಳೆ ಸುರಿದಿತ್ತು. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿತ್ತು. ಗಾಂಧಿನಗರದ ಲಿಡ್ಕರ್ ಕಾಲೋನಿಯಲ್ಲಿ ಮನೆಯೊಂದರ ಗೋಡೆ ಕುಸಿದು ಪರಿಣಾಮ ಮಗ್ಗಿ (40) ಎಂಬ ವ್ಯಕ್ತಿ ಆ.14 ರಂದು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.

Heavy rain in Mysuru: Cities are covered with water

ಮಂಗಳವಾರ ಬೆಳಿಗ್ಗೆಯಿಂದ ಬಿಡುವು ಕೊಟ್ಟಿದ್ದ ಮಳೆ ಇದೀಗ ಮತ್ತೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಇತ್ತ ಭಾರಿ ಮಳೆ ಹಿನ್ನೆಲೆ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಬೇರು ಸಮೇತ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಹಾನಿಯಾಗಿಲ್ಲ. ಮರ ಉರುಳಿ ಬಿದ್ದಿರುವ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.

English summary
A man dies and many places in the city are coverd with water due to heavy rain in water. The man dies on 14th Aug.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X