ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವ ಪ್ರಸಿದ್ಧ ಮೈಸೂರು ದಸರಾಕ್ಕೆ ಬೇರೆಲ್ಲೂ ಇಲ್ಲ ಸಾಟಿ!

By ಬಿ.ಎಂ.ಲವಕುಮಾರ್
|
Google Oneindia Kannada News

ಮೈಸೂರು, ಸೆಪ್ಟೆಂಬರ್ 30: ನಮ್ಮ ಭಾರತೀಯ ಸಂಸ್ಕೃತಿಯ ಚರಿತ್ರೆಯಲದಲ್ಲಿ ಮೈಸೂರು ದಸರಾ ಹೊರತುಪಡಿಸಿದರೆ ಇಷ್ಟೊಂದು ಸುದೀರ್ಘ ಕಾಲ ನಡೆದು ಬಂದಿರುವ ಮತ್ತೊಂದು ಹಬ್ಬ ಕಾಣಸಿಗುವುದು ಬಹಳ ಅಪರೂಪ.

ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಈ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಯೊಂದಿಗೆ ತೆರೆಕಾಣುತ್ತದೆ.

ವೈಭವದ ದಸರಾ ವಿಶೇಷ ಪುಟ

ಕರ್ನಾಟಕದ ಇತಿಹಾಸದಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿ ವಿಜಯನಗರ ಸಾಮ್ರಾಜ್ಯ ಕಟ್ಟಿ ವೈಭವದಿಂದ ಮೆರೆದವರು ವಿಜಯನಗರ ಅರಸರು. ಅವರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಮಹೋತ್ಸವ ಇಂದಿಗೂ ನಡೆದುಕೊಂಡು ಹೋಗುತ್ತಿದ್ದು, ಈ ಬಾರಿ 407ನೇ ದಸರಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ.

ದಸರಾ ವೈಭವ 2017: ಸರಳ ದಸರಾದ ಅಪರೂಪದ ಚಿತ್ರಗಳು

ಈ ಉತ್ಸವವನ್ನು ವೀಕ್ಷಿಸಲು ದೇಶ-ವಿದೇಶಗಳ ಗಣ್ಯಾತಿಗಣ್ಯರು, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ ದಾಖಲೆಗಳುಂಟು. ಅಷ್ಟೇ ಅಲ್ಲ 11ನೇ ಶತಮಾನದಲ್ಲೇ ಇಲ್ಲಿಗೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗರಾದ ಅಲ್ಬೆರೋನಿ, 15-16ನೇ ಶತಮಾನದಲ್ಲಿ ಬಂದಿದ್ದ ಪರ್ಷಿಯಾದ ಅಬ್ದುಲ್ ರಜಾಕ್, ಇಟಲಿಯ ನಿಕೋಲಕೊಂಟಿ, ಪೋರ್ಚುಗೀಸಿನ ಡೊಮಿಂಗೋಪಾಯಸ್ (1520-1522) ಮೊದಲಾದವರು ವಿಜಯನಗರ ಸಾಮ್ರಾಜ್ಯದ ವೈಭವೋಪೇತವಾದ ಈ ಮಹೋತ್ಸವವನ್ನು ಕೊಂಡಾಡಿ ತಮ್ಮ ಪ್ರವಾಸ ಕಥನಗಳಲ್ಲಿ ದಾಖಲಿಸಿದ್ದಾರೆ.

ವಿಜಯನಗರದ ರಾಜಪರಂಪರೆ

ವಿಜಯನಗರದ ರಾಜಪರಂಪರೆ

ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು.

ಶ್ರದ್ಧಾ-ಭಕ್ತಿಯ ಹಬ್ಬ

ಶ್ರದ್ಧಾ-ಭಕ್ತಿಯ ಹಬ್ಬ

ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಆಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು.

ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾದ ದಸರಾ

ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾದ ದಸರಾ

ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ "ಮೈಸೂರು ದಸರಾ" ಎಂದು ವಿಶ್ವವಿಖ್ಯಾತಿಯಾಯಿತು.

ಜಂಬೂ ಸವಾರಿ ಎಂಬ ಪ್ರಮುಖ ಆಕರ್ಷಣೆ

ಜಂಬೂ ಸವಾರಿ ಎಂಬ ಪ್ರಮುಖ ಆಕರ್ಷಣೆ

ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು.

English summary
World famous Jamboo Savari in Myusuru Dasara is takaing place today in Mysuru. Here is a brief of Mysuru Dasara as well as Jamboo savari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X