ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಎತ್ತಿನಗಾಡಿ ಪ್ರತಿಭಟನೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಡಿಸೆಂಬರ್ 17 : ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಎನ್ ಎಸ್ ಯು ಐ ಸಂಘಟನೆ ವತಿಯಿಂದ ಎತ್ತಿನ ಗಾಡಿ ಮೇಲೆ ಬೈಕ್ ಇರಿಸಿ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ 500 ಹಾಗೂ 1000 ಮುಖಬೆಲೆಯ ನೋಟುಗಳನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ಹೆಚ್ಚಿಸುತ್ತಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದರು.[ತೈಲ ಬೆಲೆ ಏರಿಕೆಯ ಬಿಸಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ]

Place the bike on an ox cart

ಎತ್ತಿನ ಗಾಡಿಯ ಮೇಲೆ ಬೈಕ್ ಇರಿಸಿಕೊಂಡು ಹೋಗುವ ಮೂಲಕ ಹಾಗೂ ಕುದುರೆ ಸವಾರಿ, ಸೈಕಲ್ ತುಳಿಯುತ್ತಾ ಸಾಗಿ ಅಣಕು ಪ್ರದರ್ಶನ ಮಾಡುವ ಮೂಲಕ ಪೆಟ್ರೋಲ್, ಡೀಸೆಲ್ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ನ್ನು ರು 30 ಗೆ ಕೊಡುವುದಾಗಿ ತಿಳಿಸಿದ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ಒಂಭತ್ತು ಬಾರಿ ಬೆಲೆ ಏರಿಕೆ ಮಾಡಿ ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದೆ ಎಂದು ಆರೋಪಿಸಿದೆ. ಕಚ್ಚಾ ತೈಲದ ಬೆಲೆಗೆ ಹೋಲಿಸಿದರೆ ಪೆಟ್ರೋಲ್ ನ ಬೆಲೆ ಸುಮಾರು ರು 10. ಹಾಗೂ ಡೀಸೆಲ್ ನ ಬೆಲೆಯನ್ನು ರು 10 ಕಡಿಮೆ ಮಾಡಬೇಕಾಗುತ್ತದೆ. ಆದ್ದರಿಂದ ಕೂಡಲೇ ದರವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

Place the bike on an ox cart

ಪ್ರತಿಭಟನೆಯಲ್ಲಿ ನಗರಪಾಲಿಕೆಯ ಸದಸ್ಯರಾದ ಸುನೀಲ್, ಸುನೀಲ್ ಕುಮಾರ್, ರಘುರಾಂ, ಪ್ರಶಾಂತ ಗೌಡ, ರೆಹಮಾನ್, ರಾಘವೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
hiked diesel, petrol rate, protest against the NSUI Place the bike on an ox cart in mysuru.
Please Wait while comments are loading...