ಮೈಸೂರು : ಸಮ್ಮೇಳನಕ್ಕೆ ಹುಸಿ ಬಾಂಬ್ ಬೆದರಿಕೆ ಪತ್ರ

Posted By:
Subscribe to Oneindia Kannada

ಮೈಸೂರು, ನವೆಂಬರ್ 26 : ಅರಮನೆ ನಗರಿಯಲ್ಲಿ ನಡೆಯುತ್ತಿರುವ ಅಕ್ಷರ ಜಾತ್ರೆ ಸಂದರ್ಭದಲ್ಲಿ ಉಗ್ರರು ಬಾಂಬ್ ದಾಳಿ ನಡೆಸಬಹುದು ಎಂಬ ಅನಾಮಧೇಯ ಪತ್ರವೊಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಲುಪಿದೆ.

ಚಿತ್ರಗಳು : ಮೈಸೂರಲ್ಲಿ 83ನೇ ಸಾಹಿತ್ಯ ಸಮ್ಮೇಳನ ಸಂಭ್ರಮ

ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಭಾನುವಾರ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಸಮ್ಮೇಳನದ ಸಂದರ್ಭದಲ್ಲಿ ಉಗ್ರರು ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಅನಾಮಧೇಯ ಪತ್ರದಲ್ಲಿ ತಿಳಿಸಲಾಗಿದೆ.

ಸಾಹಿತ್ಯ ಸಮ್ಮೇಳನ ಕವಿಗೋಷ್ಠಿಯಲ್ಲಿ ಮೇಳೈಸಿದ 'ಕಾವೇರಿ' ಕವನ

Hoax letter threatens bomb attack on Kannada Sahitya Sammelan

ಪಾಕಿಸ್ತಾನ ಧ್ವಜ, ಇಸ್ಲಾಂ ಧರ್ಮ ಹಾಗೂ ಮಹಮದ್ ಪೈಗಂಬರ್ ಕುಟುಂಬದವರ ವಿಚಾರವಾಗಿ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವ ಹಿನ್ನಲೆ ಸೇಡಿನ ರೂಪದಲ್ಲಿ ರಕ್ತಪಾತ ನಡೆಸಲು ತಯಾರಿ ನಡೆದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

84ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ

ಸಿಸಿ ಕ್ಯಾಮರಾ ಆಳವಡಿಸಿ ಹೆಚ್ಚಿನ ಭದ್ರತೆ ಓದಗಿಸಿ. ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ ಎಂದು ಅನಾಮಧೇಯ ವ್ಯಕ್ತಿ ಪತ್ರದಲ್ಲಿ ಒತ್ತಾಯಿಸಿದ್ದಾನೆ. ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಶಿಕ್ಷಕರನ್ನ ಕಾರ್ಯಕ್ರಮದಲ್ಲಿ ತೊಡಗಿಸುವಂತೆಯೂ ಪತ್ರದಲ್ಲಿ ಸಲಹೆ ನೀಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A letter was received threatening to bomb at 83rd Akhil Bharat Kannada Sahitya Sammelan, Mysuru . The threat letter was later declared to be a hoax.\

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ