ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡು ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಮಹದೇವಪ್ಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 9: ನಂಜನಗೂಡು ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಂಜನಗೂಡಿನ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಯಾವುದೇ ಗೊಂದಲ ಬೇಡ. ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.[ಮೈಸೂರಿನಲ್ಲಿ ಸಿಎಂ- ಎಚ್.ಸಿ. ಮಹದೇವಪ್ಪ ರಹಸ್ಯ ಮಾತುಕತೆ]

I am not a contestant on the Nanjangud by-election: H C Mahadevappa

ನನ್ನ ಮಗನಿಗಾಗಿ ನಾನು ಎಂದೂ ಪಕ್ಷದಲ್ಲಿ ಟಿಕೇಟ್ ಕೇಳಿಲ್ಲ. ಆತ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು. ನಂಜನಗೂಡಿನಲ್ಲಿ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯದಂತೆ ಸೂಕ್ತ ವ್ಯಕ್ತಿ ಅಭ್ಯರ್ಥಿಯಾಗುತ್ತಾರೆ. ಉಪಚುನಾವಣೆ ಸಂಬಂಧ ಕಾಂಗ್ರೆಸ್ ‌ನಲ್ಲಿ ಯಾವುದೇ ಗೊಂದಲ ಇಲ್ಲ. ವೀಕ್ಷಕರು ಕ್ಷೇತ್ರಕ್ಕೆ ಬಂದು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಬಗ್ಗೆ ಎಐಸಿಸಿ ತೀರ್ಮಾನವೇ ಅಂತಿಮ ಎಂದರು.

I am not a contestant on the Nanjangud by-election: H C Mahadevappa

ಮೈಸೂರಿನಲ್ಲಿ ರಸ್ತೆ ಸುರಕ್ಷ ಸಪ್ತಾಹ: 25 ಗಸ್ತುಕಾರುಗಳಿಗೆ ಚಾಲನೆ

ಮೈಸೂರು: 28ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ 2017 ಹಾಗೂ ಅಪರಾಧ ತಡೆ ಮಾಸಾಚರಣೆ 2016-17ರ ಉದ್ಘಾಟನೆ ಮತ್ತು 25 ನೂತನ ಪೊಲೀಸ್ ಗಸ್ತು ಕಾರುಗಳಿಗೆ ಗಳಿಗೆ ಸೋಮವಾರ ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.[ಸಿದ್ದರಾಮಯ್ಯಗೆ ಪ್ರತ್ಯುತ್ತರ ನೀಡಲು ಶ್ರೀನಿವಾಸ ಪ್ರಸಾದ್ ಸಜ್ಜು]

I am not a contestant on the Nanjangud by-election: H C Mahadevappa

ಅಪರಾಧ ತೆಡೆ ಮಾಸಾಚರನೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿ, ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಇಲಾಖೆ ಮತ್ತು ಇತರ ಇಲಾಖೆಗಳು ಕೈಜೋಡಿಸಿ ರಸ್ತೆ ಸುರಕ್ಷಾ ಸಪ್ತಾಹವನ್ನು ಮಾಡುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದರು. ಹೆಚ್ಚುತ್ತಿರುವ ಅಪರಾಧಗಳನ್ನು ತಡೆಯುವುದೇ ಇದರ ಮುಖ್ಯ ಉದ್ದೇಶವಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದರು.

ನಂತರ ಗಸ್ತು ವಾಹನಗಳಾದ 25 ಮಾರುತಿ ಎರ್ಟಿಗಾ ಕಾರುಗಳಿಗೆ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರಿಸಿದರು. ಮೈಸೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಷಟ್ಪಥ(6ಪಥ) ಟೆಂಡರ್ ಡಿಸೆಂಬರ್ ನಲ್ಲಿಯೇ ಕರೆಯಬೇಕಿತ್ತು. ಆದರೆ ಜನವರಿ 16ಕ್ಕೆ ಕರೆಯಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳು ಜಾಥಾ ನಡೆಸಿದರು.

English summary
I am not a contestant on the Nanjangud by-election said District in-charge minister H C Mahadevappa. And Karnataka Public Works Minister H C Mahadevappa kick off National road safety month in Mysuru. He also gave green signal to 25 Police Patrol vehicles on this occasion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X