ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಷ್ಟ ಇದ್ರೆ ಇರಿ, ಇಲ್ಲ ಬಿಟ್ಟು ಹೋಗಿ: ಕುಮಾರಸ್ವಾಮಿ ಖಡಕ್ ಎಚ್ಚರಿಕೆ!

By ಯಶಸ್ವಿನಿ ಎಂ.ಕೆ
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಫುಲ್ ಗರಂ : ಶಾಸಕರಿಗೆ ತರಾಟೆ | Oneindia Kannada

ಮೈಸೂರು, ಮಾರ್ಚ್ 2: ಜೆಡಿಎಸ್ ಪಕ್ಷದಲ್ಲಿ ಮೊದಲ ಪಟ್ಟಿ ಘೋಷಿಸಿದ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ ಹಾಗೂ ಬಂಡಾಯದ ಹೊಗೆಗೆ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ಡಿ. ಕೆ. ಯಾರು ಎಲ್ಲಿ ಬೇಕಾದ್ರೂ ಹೋಗಲು ಮುಕ್ತ ಅವಕಾಶವಿದೆ. ಬರೋರು ಬರಬಹುದು, ಹೋಗೋರು ಹೋಗಬಹುದು, ನಾನ್ಯಾರನ್ನು ಹಿಡ್ಕೊಂಡಿಲ್ಲ. ಯಾವುದೇ ರೀತಿಯ ಟಿಕೆಟ್ ಗೊಂದಲವಿಲ್ಲ ಎಂದು ಖಂಡ- ತುಂಡವಾಗಿ ಹೇಳಿದರು.

ಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದ್ದಿದ್ದು ನಿಜ: ಎಚ್ ಡಿ ಕೆ ಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದ್ದಿದ್ದು ನಿಜ: ಎಚ್ ಡಿ ಕೆ

ಈ ಪಕ್ಷ ಇರೋದು ಯಾವುದೇ ಒಂದು ಕುಟುಂಬಕ್ಕಲ್ಲ. ಇದು ದೇವೇಗೌಡರ ಕುಟುಂಬಕ್ಕೂ ಸೀಮಿತವಲ್ಲ. ಲಕ್ಷಾಂತರ ಕಾರ್ಯಕರ್ತರು ಕಟ್ಟಿರುವಂತಹ ಪಕ್ಷ ಇದಾಗಿದೆ.

ಮೊದಲು ಸಣ್ಣತನ

ಮೊದಲು ಸಣ್ಣತನ

ಎಂಎಲ್ ಸಿ ಚುನಾವಣೆಯಲ್ಲಿ ಎರಡನೇ ಬಾರಿ ಗೆದ್ದು ವೈಯಕ್ತಿಕ ವರ್ಚಸ್ಸಿನಿಂದ ಗೆದ್ದಿದ್ದೀನಿ, ಜೆಡಿಎಸ್ ನಿಂದ ಗೆದ್ದಿಲ್ಲ ಅಂತ ಸಂದೇಶ್ ನಾಗರಾಜ್ ಹೇಳಿಕೆ ಕೊಟ್ಟಿದ್ರು. ಇಂತಹವರಿಗೆ ಏನಾದ್ರೂ ಅಲ್ಪಸ್ವಲ್ಪ ಪಾಪಪ್ರಜ್ಞೆ ಇದೆಯಾ? ಇಂತವರಿಂದ ಪಕ್ಷ ಕಟ್ಟಿದ್ದೀನಿ ಅಂತ ತಿಳ್ಕೊಂಡಿದ್ದೀನಾ? ಹೀಗಾಗಿ ಹೇಳುತ್ತಿದ್ದೇನೆ ಇರೋರು ಇರಬಹುದು ಹೋಗೋರು ಹೋಗ್ಬೋದು ಅಂತ. ಮೊದಲು ಅವರು ಇಂತಹ ಸಣ್ಣತನಗಳನ್ನು ಬಿಡಬೇಕಾಗುತ್ತದೆ ಅಂತ ಬಹಳ ವಿನಮ್ರತೆಯಿಂದ ಹೇಳಲು ಬಯಸುತ್ತೇನೆ ಎಂದು ಹೆಚ್‍ಡಿಕೆ ಹೇಳಿದರು.

ಗೆಲ್ಲುವ ದೃಷ್ಟಿಯಿರಲಿ, ವೈಮನಸ್ಸಲ್ಲ

ಗೆಲ್ಲುವ ದೃಷ್ಟಿಯಿರಲಿ, ವೈಮನಸ್ಸಲ್ಲ

ಚುನಾವಣೆಯಲ್ಲಿ ಗೆಲ್ಲುವಂತಹ ದೃಷ್ಟಿಯಿಂದಲೇ ತೀರ್ಮಾನಗಳನ್ನು ಮಾಡಿದ್ದೇನೆ. ಇಲ್ಲಿ ಯಾವುದೇ ವ್ಯಾಮೋಹ ಅಥವಾ ಇನ್ಯಾವುದೋ ಕಾರಣಕ್ಕೆ ಟಿಕೆಟ್ ಕೊಡುವ ಪ್ರಶ್ನೆಯಿಲ್ಲ. ಈ ಬಾರಿ ಜನತಾ ದಳ 113 ಸ್ಥಾನ ಗೆಲ್ಲಬೇಕೆಂಬ ಹಿನ್ನೆಲೆಯಲ್ಲಿ ಇಂದು ಈ ತೀರ್ಮಾನ ತೆಗೆದುಕೊಂಡಿದ್ದೇವೆ. ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರಿಗೂ ನಾನು ಹೇಳುವುದಿಷ್ಟೆ, ಹಿಂದುಗಡೆ ಒಂದು, ಮುಂದುಗಡೆ ಒಂದು ಮಾತಾನಾಡುವುದನ್ನು ನಿಲ್ಲಿಸಿ. ಈ ಪಕ್ಷದಿಂದ ಅವರ ಕುಟುಂಬಕ್ಕೆ ಸಿಕ್ಕಿರುವ ಲಾಭವೇನು? ಹಾಗೂ ಅವರಿಂದ ಈ ಪಕ್ಷಕ್ಕೆ ಸಿಕ್ಕಿರೋ ಲಾಭವೇನು? ಎಂಬುದನ್ನು ಅವರು ಒಬ್ಬರೇ ಕೂತು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದರು.

ಕಾಂಗ್ರೆಸ್ ನೊಂದಿಗೆ ಮೈತ್ರಿ ಕನಸ್ಸಿನಲ್ಲಿಯೂ ಇಲ್ಲ

ಕಾಂಗ್ರೆಸ್ ನೊಂದಿಗೆ ಮೈತ್ರಿ ಕನಸ್ಸಿನಲ್ಲಿಯೂ ಇಲ್ಲ

ಚುನಾವಣೆ ಕುರಿತು ಮಾತನಾಡಿ, ಕಾಂಗ್ರೆಸ್ ಜೊತೆ ನಾನು ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಇರುವ ವಾಸ್ತವ ಸಂಖ್ಯೆಗಳ ಬಗ್ಗೆ ಮಾತನಾಡಿದ್ದೇನೆ ಮುಂದೆ ಅಧಿಕಾರ ಬೇಕಾದರೆ, ಇವತ್ತಿನ ಹಗರಣ ಮುಚ್ಚಿಕೊಳ್ಳಲು ಜೆಡಿಎಸ್ ಕಾಲು ಹಿಡಿಯಬೇಕಾಗುತ್ತದೆ. ಎಲ್ಲರೂ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಮೈತ್ರಿ ಸರ್ಕಾರಕ್ಕೆ ಹೋರಾಡುತ್ತಿಲ್ಲ.

ಬಹುಮತದ ಸರ್ಕಾರಕ್ಕೆ ಹೋರಾಡುತ್ತಿದ್ದೇನೆ. ಓವೈಸಿ ಪಕ್ಷದ ಜೊತೆ ಮೈತ್ರಿಯ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾರ ಜೊತೆಗೆ ಬೇಕಾದರೂ ಮಾತುಕತೆ ನಡೆಸುತ್ತೇವೆ ಎಂದರು.

ಪರ್ಸಂಟೇಜ್ ಸರ್ಕಾರ ತೊಲಗಲಿ

ಪರ್ಸಂಟೇಜ್ ಸರ್ಕಾರ ತೊಲಗಲಿ

ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಪರ್ಸೆಂಟೆಜ್ ಬಗ್ಗೆ ಮಾತಾಡುತ್ತಿವೆ. ಇಬ್ಬರು ಪರ್ಸೆಂಟೆಜ್ ನಲ್ಲಿ ನಿಸ್ಸೀಮರು. ನನ್ನ ಆಡಳಿತದಲ್ಲಿ ಎಷ್ಟು ಪರ್ಸೆಂಟೆಜ್ ಇತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪರ್ಸೆಂಟೆಜ್ ಇದೆ ಎಂದು ಎಲ್ಲಾ ಗುತ್ತಿಗೆದಾರರಿಗೆ ಗೊತ್ತಿದೆ. ಸಚಿವ ರಮೇಶ್ ಕುಮಾರ್ ಸರ್ಕಾರದ ಭ್ರಷ್ಟಾಚಾರವನ್ನ ವಿಧಾನಸಭೆಯಲ್ಲಿ ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಸರ್ಕಾರ ಬೇಕಾ? ಪರ್ಸೆಂಟೆಜ್ ರಹಿತ ಸರ್ಕಾರ ಬೇಕಾ.? ಜನ ತೀರ್ಮಾನ ಮಾಡಲಿ ಎಂದು ಭಯ ಪಕ್ಷಗಳಿಗೆ ಟಾಂಗ್ ನೀಡಿದರು.

ಎಚ್ಡಿಕೆ ಸಿಎಂ ಮಾಡುವುದು ನನ್ನ ಗುರಿಯಲ್ಲ : ದೇವೇಗೌಡ ಎಚ್ಡಿಕೆ ಸಿಎಂ ಮಾಡುವುದು ನನ್ನ ಗುರಿಯಲ್ಲ : ದೇವೇಗೌಡ

English summary
'If any one does not want to be in JDS can go out, this party does not only belong to H D Devegowda family. Please try hard to get success in Karnataka assembly elctions 2018, forget all misunderstandings' JDS state president and former chief minister of Karnataka H D Kumaraswamy told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X