ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಐಟಿ ಇಲಾಖೆಯ ಏಜೆಂಟರೇ? ಸಿಎಂ ಪ್ರಶ್ನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 23 : ಇಬ್ಬರು ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರೊ೦ಬ್ಬರು ಐಟಿ ಕೈಯ್ಯಲ್ಲಿ ಸದ್ಯದಲ್ಲೇ ಸಿಕ್ಕಿಬೀಳುತ್ತಾರೆಂದು ಹೇಳಲು ಯಡಿಯೂರಪ್ಪನವರು ಐಟಿ ಇಲಾಖೆಯ ಏಜೆಂಟರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಮೈಸೂರಿನಲ್ಲಿ ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡಬಾರದು. ಯಾವ ಆಧಾರದ ಮೇಲೆ ಹಾಗೇ ಆರೋಪ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.[ರಾಹುಲ್ ಗಾಂಧಿ ಮನೆಯಲ್ಲೇ ಭೂಕಂಪ ಆಗುತ್ತೆ: ಬಿಎಸ್ ವೈ]

Is Yeddyurappa an IT Department Chief Agent ? CM Question

ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳೂ ತಾವೇ ಅಧಿಕಾರಕ್ಕೆ ಬಂದವರಂತೆ ವರ್ತಿಸುತ್ತಿದ್ದಾರೆ. ನಾವು ಜೆಡಿಎಸ್ ಪಕ್ಷದಲ್ಲಿದ್ದಾಗಲೇ ಅಧಿಕಾರಕ್ಕೆ ಬರಲಾಗಲಿಲ್ಲ. ಜನತೆ ಆಶೀರ್ವಾದ ಮಾಡಬೇಕಷ್ಟೇ. ಇವರೆಲ್ಲಾ ಏನೇ ಮಾಡಿದರೂ ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರೋದು ಎಂದು ಹೇಳಿದರು.[ಮಾತಾಡಲು ಬಿಡಿ, ಭೂಕಂಪ ಏನಂತ ತೋರಿಸ್ತೀನಿ : ರಾಹುಲ್]

ರಂಗಾಯಣ ಕಲಾವಿದರ ಸಮಸ್ಯೆಗಳ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಂಗಾಯಣ ಕಲಾವಿದರ ಸಮಸ್ಯೆಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಜೊತೆ ಚರ್ಚಿಸುತ್ತೇನೆ ಎಂದರು.

ನೀಟ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡದಿರುವ ಕುರಿತು ಪ್ರಶ್ನಿಸಿದಾಗ ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಖ್ಯಕಾರ್ಯದರ್ಶಿಗೆ ಹೇಳಿದ್ದೇನೆ. ಕನ್ನಡವೂ ಸಹ ಎಲ್ಲ ಭಾಷೆಗಳಂತೆ ರಾಷ್ಟ್ರೀಯ ಭಾಷೆಯಾಗಿದ್ದು ಕನ್ನಡಕ್ಕೆ ಅವಕಾಶ ಕೊಡದ ಕುರಿತು ನಮ್ಮ ರಾಜ್ಯದ ಸಂಸದರು ಸಂಸತ್ ನಲ್ಲಿ ಧ್ವನಿ ಎತ್ತಬೇಕಿತ್ತು ಎಂದರು.

English summary
Is Yeddyurappa an IT Department Chief Agent ? Question the CM Siddaramaiah in mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X