ಮೈಸೂರಿನಲ್ಲಿ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಸಾವು

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಜನವರಿ 12 : ಯುವಕನೊಬ್ಬ ಮನೆಯಲ್ಲಿದ್ದ ಗನ್ನಿನಿಂದ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಗುರುವಾರ ಬೆಳಗಿನ ಜಾವ ಮೈಸೂರಿನಲ್ಲಿ ನಡೆದಿದೆ.

ರಾಘವೇಂದ್ರ ಬಡಾವಣೆ ನಿವಾಸಿ ಭುವನ್ (19) ಗುಂಡು ಹಾರಿಸಿಕೊಂಡು ಮೃತಪಟ್ಟ ವ್ಯಕ್ತಿ. ಈತ ಮೈಸೂರಿನ ಎನ್ಐಇ ಕಾಲೇಜಿನಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಈತನ ತಂದೆ ರಾಮಣ್ಣ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ವೃತ್ತಿಯಿಂದ ನಿವೃತ್ತರಾಗಿದ್ದರು. ಅವರಿಗೆ ನೀಡಲಾಗಿದ್ದ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಬುಧವಾರ ರಾತ್ರಿ 11 ಗಂಟೆಗೆ ಊಟ ಮುಗಿಸಿ ತನ್ನ ರೂಮ್'ಗೆ ತೆರಳಿದ ಭುವನ್, ಪೋನ್'ನಲ್ಲಿ ಬಹಳ ಹೊತ್ತು ಮಾತನಾಡಿದ್ದು, ಮನೆಯವರು ಯಾರೆಂದು ವಿಚಾರಿಸಲಾಗಿ ತನ್ನ ಸ್ನೇಹಿತ ಎಂಬ ಉತ್ತರ ನೀಡಿದ್ದಾನೆ ಎಂದು ತಿಳಿದು ಬಂದಿದೆ.[ಹುಬ್ಬಳ್ಳಿಯಲ್ಲಿ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ]

ITI Student shot himself to suicide in mysuru

ಆದರೆ ಗುರುವಾರ ಬೆಳಗಿನ ಜಾವ 5.30 ರ ಸುಮಾರಿಗೆ ರಿವಾಲ್ವರ್'ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ನಜರ್ ಬಾದ್ ಠಾಣೆಯ ಇನ್ಸ್ ಪೆಕ್ಟರ್ ಶೇಖರ್ ಅವರು ಸಿಬ್ಬಂದಿ ಪ್ರಕಾಶ್, ಮಹೇಶ್ ಜೊತೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸಹಜ ಸಾವು ಪ್ರಕರಣದ ದಾಖಲಿಸಿಕೊಳ್ಳಲಾಗಿದ್ದು, ಶವವನ್ನು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ದೂರವಾಣಿಯ ಸಂಪೂರ್ಣ ಮಾಹಿತಿಯ ಬಳಿಕವಷ್ಟೇ ಆತ್ಮಹತ್ಯೆಗೆ ಕಾರಣ ತಿಳಿಸವುದಾಗಿ ಪೊಲೀಸರು ತಿಳಿಸಿದ್ದು, ನಜರ್'ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಪ್ರಕರಣ ಸಂಬಂಧ ಸೇನಾ ನಿವೃತ್ತ ರಾಮಣ್ಣ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
ITI Student shot to suicide in Mysuru. The son of a retired Army Ramannana.He shot himself died. What is the extract case is not know.
Please Wait while comments are loading...