ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ

By Mahesh
|
Google Oneindia Kannada News

Recommended Video

ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿಂಧ್ಯ | Oneindia Kannada

ಬೆಂಗಳೂರು, ಅಕ್ಟೋಬರ್ 30: ಜಾತ್ಯಾತೀತ ಜನತಾದಳಕ್ಕೆ ಮರಳಿರುವ ಮಾಜಿ ಸಚಿವ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯ ಅವರಿಗೆ ಪ್ರತಿಷ್ಠಿತ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಆಹ್ವಾನ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.

ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್‌ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

JD(S) likely to field PGR Sindhia from Varuna constituency

ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ವರುಣಾದಲ್ಲಿ ಒಕ್ಕಲಿಗರು, ಲಿಂಗಾಯಿತರು ಮತ್ತು ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚು. ಈ ಲೆಕ್ಕಾಚಾರದಲ್ಲಿ ಸಿಂಧ್ಯ ಅವರನ್ನು ಕಣಕ್ಕೆ ಇಳಿಸಿ, ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲೇ ಕಟ್ಟಿ ಹಾಕುವ ಚಿಂತನೆ ಜೆಡಿಎಸ್‌ ವರಿಷ್ಠರದ್ದಾಗಿದೆ.

JD(S) likely to field PGR Sindhia from Varuna constituency

ಭಾನುವಾರ ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿಂಧ್ಯ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

English summary
Former minister P G R Sindhia is likely to contest from the Varuna Assembly constituency in Mysuru district as the JD(S) candidate in the coming elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X