ಎಚ್ಡಿಕೆ ಮುಖ್ಯಮಂತ್ರಿಯಾಗಲೆಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ

Posted By:
Subscribe to Oneindia Kannada

ಮೈಸೂರು, ಜೂನ್ 14 : ಎಚ್ ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷೆ ಶೀಲಾ ನಾಯ್ಕ ಅವರ ನೇತೃತ್ವದಲ್ಲಿ ಜೆಡಿಎಸ್ ಮಹಿಳಾ ಕಾರ್ಯಕರ್ತರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಬುಧವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಜೆಡಿಎಸ್ ಮಹಿಳಾ ಕಾರ್ಯಕರ್ತೆಯರು ಚಾಮುಂಡೇಶ್ವರಿ ತಾಯಿಗೆ ಸೀರೆ, ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿ ಎಚ್.ಡಿ.ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ಜಂತಕಲ್ ಮೈನಿಂಗ್: ಎಚ್ಡಿಕೆ ನಿರೀಕ್ಷಣಾ ಜಾಮೀನು ಅರ್ಜಿ ವಜಾ

JDS women’s special prayers to Chamundeshwari to make HDK CM

ಬಳಿಕ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಮ್ಮ ನಾಯಕ ಸಿಎಂ ಆಗಲಿದ್ದು, ಜಂತಕಲ್ ಮೈನಿಂಗ್ ಪ್ರಕರಣದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನಿರಾಪರಾಧಿಯಾಗಿ ಹೊರಬರಲಿದ್ದಾರೆ ಎಂದು ಶೀಲಾನಾಯಕ್ ಆಶಾಭಾವನೆ ವ್ಯಕ್ತಪಡಿಸಿದರು.

ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ನಮ್ಮ ಆಶಯ.

ಕಾಂಗ್ರೆಸ್ ಅತ್ಯಂತ ಭ್ರಷ್ಟ ಸರ್ಕಾರ. ಮಹಿಳೆ ಹಾಗೂ ರೈತರ ಮೇಲೆ ಇದು ನಿರಂತರ ಧೋರಣೆ ನಡೆಸುತ್ತಲೇ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದದಾಳಿ ನಡೆಸಿದರು.

ರೈತರ ತ್ಮಹತ್ಯೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಭಾಗ್ಯಗಳ ಯೋಜನೆಯಲ್ಲಿ ಬರೀ ಕಲಬೆರಕೆ ಆಹಾರ ನೀಡುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಜನರು ಬೇಸತ್ತಿದ್ದಾರೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
JDS women’s wing members offered prayers to Chamundeshwari to make H D Kumaraswamy as the next CM of Karnataka. The team was led by Sheela Naik of women’s wing. They offered saree and bagina to the Goddess.
Please Wait while comments are loading...