ಜಿಲ್ಲಾಧಿಕಾರಿಗೆ ಧಮ್ಕಿ : ಕಾಂಗ್ರೆಸ್‌ನಿಂದ ಕೆ.ಮರೀಗೌಡ ಅಮಾನತು

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 09 : ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಕೆ.ಮರೀಗೌಡ ಅವರು ಸದ್ಯ ಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಕೆ.ಮರೀಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕೆಪಿಸಿಸಿ ಮಂಗಳವಾರ ಆದೇಶ ಹೊರಡಿಸಿದೆ. ಜೈಲಿನಲ್ಲಿರುವ ಮರೀಗೌಡ ಅವರು ಮೈಸೂರು ಜೆಎಂಎಫ್‌ಸಿ ಕೋರ್ಟ್‌ಗೆ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ವಜಾಗೊಳಿಸಿತ್ತು.[ಮರೀಗೌಡಗೆ ಜಾಮೀನಿಲ್ಲ, ಜೈಲೇ ಗತಿ]

K Mari Gowda suspended from Congress

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಎದುರಿಸುತ್ತಿರುವ ಕೆ.ಮರೀಗೌಡ ಅವರು ಆಗಸ್ಟ್ 3ರಂದು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಕೋರ್ಟ್ ಅವರನ್ನು ಆಗಸ್ಟ್ 16ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.[ಶರಣಾದ ಕೆ.ಮರೀಗೌಡ]

ಅಮಾನತು ಮಾಡುವುದಾಗಿ ಹೇಳಿದ್ದರು : ಜುಲೈ 23ರಂದು ಮೈಸೂರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮರೀಗೌಡರನ್ನು ಪಕ್ಷದಿಂದ ಅಮಾನತು ಮಾಡುವುದಾಗಿ ಹೇಳಿದ್ದರು. ಆಗಸ್ಟ್ 9ರಂದು ಅಮಾತನು ಆದೇಶವನ್ನು ಹೊರಡಿಸಲಾಗಿದೆ.[ಜಿಲ್ಲಾಧಿಕಾರಿಗೆ ಧಮ್ಕಿ, ಸಿದ್ದರಾಮಯ್ಯ ಮೌನವೇಕೆ?]

ಯಾರು ಈ ಮರೀಗೌಡ? : ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ. ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪವನ್ನು ಮರೀಗೌಡ ಅವರು ಎದುರಿಸುತ್ತಿದ್ದಾರೆ.

ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಿ.ಶಿಖಾ ಅವರು ನಜರಬಾದ್‌ ಠಾಣೆಯಲ್ಲಿ ಮರೀಗೌಡ ವಿರುದ್ಧ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿರುವ ಮರೀಗೌಡ ಅವರು ಕಳೆದವಾರ ಪೊಲೀಸರ ಮುಂದೆ ಶರಣಾಗಿದ್ದಾರೆ, ಸದ್ಯ, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congress leader K.Mari Gowda suspended from the Congress party. K.Mari Gowda surrendered before the Nazarbad police, Mysuru on August 3. Mysuru Deputy Commissioner C.Shikha filed complaint against Mari Gowda alleging that he was interfering in her official work.
Please Wait while comments are loading...