'ಸಿದ್ದರಾಮಯ್ಯ ಬತ್ತಿದ ಕೆರೆಗಳನ್ನು ಮಾರಲು ಮುಂದಾಗಿರುವುದು ಸರಿಯಲ್ಲ'

Posted By:
Subscribe to Oneindia Kannada

ಮೈಸೂರು, ಜುಲೈ 23 : ಕೆರೆಗಳನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆದು ಲ್ಯಾಂಡ್ ಡೆವಲಪರ್ ಗಳಿಗೆ ಅನುಕೂಲ ಮಾಡಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶಿಸಿದ ಸೃಜನ್, ದರ್ಶನ್

ಆಷಾಢ ಹಿನ್ನಲೆ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಕೆರೆಗಳ ಡಿನೋಟಿಫಿಕೇಶನ್ ಮಾಡಲು ಯಾವುದೇ ಕಾರಣಕ್ಕೂ ಬಿಡಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೆರೆಗಳ ಅಭಿವೃದ್ಧಿಗೆ ಸಾಕಷ್ಟು ಹಣ ನೀಡಿದ್ದೆವು. ಕೆರೆಗಳನ್ನು ಅಭಿವೃದ್ಧಿ ಮಾಡುವುದು ಬಿಟ್ಟು ರಾಜ್ಯ ಸರ್ಕಾರದ ಕೆರೆ ಮಾರಲು ಮುಂದಾಗಿದೆ. ಆದರೆ ಸಿದ್ದರಾಮಯ್ಯ ಬತ್ತಿಹೋದ ಕೆರೆಗಳನ್ನು ಮಾರಲು ಮುಂದಾಗಿರುವುದು ಸರಿಯಲ್ಲ" ಎಂದರು.

K S Eshwarappa visits Chamundeshwari hills occasion of Ashadha

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಯಲ್ಲಿ ಗೃಹ ಇಲಾಖೆ ಇದ್ದರೂ ಕಾನೂನು ಸುವ್ಯವಸ್ಥೆ ಸರಿಪಡಿಸಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Nanjangud (Mysuru)

ಈಶ್ವರಪ್ಪ ಪಿಎ ವಿನಯ್, ಯಡಿಯೂರಪ್ಪ ಪಿಎ ಪ್ರಶಾಂತ್ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ವಿಚಾರ. ಪೊಲೀಸರಿಂದ ತನಿಖೆ ನಡೆಯುತ್ತಿದ್ದು ತಪ್ಪಿತಸ್ಥರಿಗೆ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Leader of Opposition in the Legislative Council K S Eshwarappa visits Chamundeshwari hills on Sunday, occasion of Ashadha.
Please Wait while comments are loading...