ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಮಪತ್ರ ಸಲ್ಲಿಕೆ ವೇಳೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಲಿರುವ ಸಚಿವರು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 20: ಕರ್ನಾಟಕ ವಿಧಾನಸಭಾ ಚುನಾವಣೆಯ ಕುತೂಹಲದ ಕ್ಷೇತ್ರದವಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು(ಏ.20) ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತಗ್ರ ಸಲ್ಲಿಕೆ ಸಮಯದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಶಿಕ್ಷಣ ಸಚಿವ ತನ್ವೀರ್ ಸೇಠ್ ಮುಂತಾದವರು ಇರಲಿದ್ದು, ಅವರಿಗೆ ಶುಭ ಹಾರೈಸಲಿದ್ದಾರೆ.

ಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆ ಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟಿ.ಬಿ.ಜಯಚಂದ್ರ, 'ಸಿದ್ದರಾಮಯ್ಯ ಅವರಿಗೆ ಮಾನಸಿಕ ಸ್ಥೈರ್ಯ ತುಂಬಲು ಬಂದಿದ್ದೇವೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಾರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ಈ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅದು ಮುಖ್ಯಮಂತ್ರಿಗಳಿಗೆ ಮತ್ತು ಹೈಕಮಾಂಡ್ ಗೆ ಬಿಟ್ಟ ವಿಚಾರ' ಎಂದರು.

Karnataka Elections: Ministers to accompany CM Siddaramaiah for nomination filing in Mysuru

ಚಿಕ್ಕನಾಯಕನಹಳ್ಳಿ ಕಾಂಗ್ರೆಸ್ ಟಿಕೆಟ್ ಸಾಸಲು ಸತೀಶ್ ಗೆ ಕೈ ತಪ್ಪಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 'ಸತೀಶ್ ಇನ್ನೂ ಯುವಕ ಇದ್ದಾನೆ ಅವರಿಗೆ ಮುಂದಿನದಿನಗಳಲ್ಲಿ ಅವಕಾಶ ಇದೆ. ಈ ಬಾರಿ ಸತಿಶ್ ನಮಗೆ ಸಾಥ್ ನೀಡುತ್ತಾರೆ. ಮುಂದಿನ ದಿನಗಳಲ್ಲಿ ನಾವು ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಅವರು ಹೇಳಿದರು.

English summary
Karnataka Assembly Elections 2018: Law minister T B Jayachandra and Education minister Tanveer Sait will accompany Karnataka chief minister Siddaramaiah for his nomination filing in Chamundeshwari constituency in Mysuru today at 12 PM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X