ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆ

By ಮೈಸೂರು ಪ್ರತಿನಿಧಿ
|
Google Oneindia Kannada News

Recommended Video

ಸಿದ್ದರಾಮಯ್ಯ ಹಾಗು ಜಿ ಟಿ ದೇವೇಗೌಡರಿಂದ ಇಂದು 12 ಗಂಟೆಗೆ ನಾಮಪತ್ರ ಸಲ್ಲಿಕೆ | Oneindia Kannada

ಮೈಸೂರು, ಏಪ್ರಿಲ್ 20: ಕರ್ನಾಟಕ ವಿಧಾನಸಭೆ ಚುನಾವಣೆಯ ಅತ್ಯಂತ ಮಹತ್ವದ ಕ್ಷೇತ್ರ ಎನ್ನಿಸಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಇಬ್ಬರು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ 2018 : ನಾಮಪತ್ರ ಸಲ್ಲಿಕೆ ಜೋರುಕರ್ನಾಟಕ ವಿಧಾನಸಭೆ ಚುನಾವಣೆ 2018 : ನಾಮಪತ್ರ ಸಲ್ಲಿಕೆ ಜೋರು

ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಜಿಟಿ ದೇವೇಗೌಡ ಅವರು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಇಂದು ಮಧ್ಯಾಹ್ನ 12 ಗಂಟೆಗೆ ತಮ್ಮ ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಮೈಸೂರಿನ ನಜರ್ ಬಾದ್ ನಲ್ಲಿರುವ ಮಿನಿ‌ ವಿಧಾನಸೌಧದಲ್ಲಿ ಉಭಯ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.

Karnataka Elections: Siddaramaiah and GT Devegowda to file nominations today

ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ಕುತೂಹಲವನ್ನೂ ಕೆರಳಿಸಿರುವ ಈ ಕ್ಷೇತ್ರದಲ್ಲಿ ಘಟಾನುಘಟಿಗಳ ನಾಮಪತ್ರ ಸಲ್ಲಿಕೆಗೆ ಅವರ ಅಪಾರ ಬೆಂಬಲಿಗರು ಸಾಕ್ಷಿಯಾಗಲಿದ್ದಾರೆ. ತನ್ನಿಮಿತ್ತ ಮಿನಿ ವಿಧಾನಸೌಧದ ಬಳಿ ಭಾರೀ ಪೊಲೀಸ್ ಬಿಗಿ ಬಂದೊಬಸ್ತ್ ಏರ್ಪಡಿಸಲಾಗಿದೆ.

English summary
Karnataka Assembly Elections 2018: Chief mniniter Siddaramaiah and JDS leader GT Devegowda who are the Congress and JDS candidates from Chamundeshwari constituency in Mysuru respectively will be filing their nomination today(April 20)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X