ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೀಲಂಬೂರು-ನಂಜನಗೂಡು ರೈಲ್ವೆ ಯೋಜನೆಗೆ ಕೇರಳದ ಒಪ್ಪಿಗೆ

|
Google Oneindia Kannada News

ಮೈಸೂರು, ಅ.18 : ನೀಲಂಬೂರು-ನಂಜನಗೂಡು ರೈಲು ಮಾರ್ಗ ಯೋಜನೆ ಜಾರಿಗೊಳಿಸಲು ಕೇರಳ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ ಸರ್ಕಾರ ಈ ರೈಲು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ.

ಗದಗ-ವಾಡಿ ರೈಲು ಮಾರ್ಗ ಯೋಜನೆ ಕಾಮಗಾರಿ ಆರಂಭಗದಗ-ವಾಡಿ ರೈಲು ಮಾರ್ಗ ಯೋಜನೆ ಕಾಮಗಾರಿ ಆರಂಭ

ಕೇರಳ ಲೋಕೋಪಯೋಗಿ ಸಚಿವ ಜಿ.ಸುಧಾಕರನ್ ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದಾರೆ. 'ಬಂಡೀಪುರ ಕಾಡಿನ ಮೂಲಕ ಮಾರ್ಗ ಹಾದು ಹೋಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸುತ್ತಿದೆ. ಎರಡೂ ರಾಜ್ಯಗಳನ್ನು ಸಂಪರ್ಕಿಸುವ ಯೋಜನೆಗೆ ನಮ್ಮ ಒಪ್ಪಿಗೆ ಇದೆ' ಎಂದು ಹೇಳಿದ್ದಾರೆ.

Kerala keen keen to implement Nilambur-Nanjangud railway project

ನೀಲಂಬೂರು-ನಂಜನಗೂಡು ರೈಲು ಮಾರ್ಗ ಕೇರಳ ಭಾಗದ ಜನರ ಬಹುದಿನದ ಬೇಡಿಕೆ. ಕರ್ನಾಟಕ ಸರ್ಕಾರ ಒಪ್ಪಿದರೆ ಪರ್ಯಾಯ ಮಾರ್ಗದಲ್ಲಿ ರೈಲ್ವೆ ಹಳಿ ಹಾಕಿ ಯೋಜನೆಯನ್ನು ಜಾರಿಗೊಳಿಸಲು ಕೇರಳ ಸಿದ್ಧವಿದೆ. ಯೋಜನೆ ಜಾರಿಯಾದರೆ ಮೈಸೂರು ಮತ್ತು ಮಲ್ಲಪ್ಪುರಂ ನಡುವೆ ಸಂಪರ್ಕ ಸಾಧ್ಯವಾಗಲಿದೆ.

ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಆರಂಭಕ್ಕೆ ಸಿದ್ದರಾಮಯ್ಯ ಮನವಿಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಆರಂಭಕ್ಕೆ ಸಿದ್ದರಾಮಯ್ಯ ಮನವಿ

ಈಗಾಗಲೇ ಕೇರಳ ಸರ್ಕಾರ ಯೋಜನೆಯ ಸಮೀಕ್ಷೆಗಾಗಿ 8 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಎರಡು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಸಮೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಇನ್ನೂ ಒಪ್ಪಿಗೆ ನೀಡಿಲ್ಲ.

English summary
Kerala PWD minister G.Sudhakaran said, Kerala govt was keen to implement Nilambur-Nanjangud railway line project. We are ready for consensus with the Karnataka. Karnataka opposed the project on the ground that it passed through Bandipur tiger reserve.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X