ಮೈಸೂರು ಮಹಾರಾಜರ ಭವ್ಯ ಇತಿಹಾಸ (ಭಾಗ 2)
(ಮುಂದುವರಿದಿದೆ...) 1572ರಿಂದ 1576ರವರೆಗೆ ನಾಲ್ಕನೇ ಬೋಳಚಾಮರಾಜ ಒಡೆಯರ್ ಆಡಳಿತ ನಡೆಸಿದರು. ಇವರ ಆಡಳಿತಾವಧಿಯಲ್ಲಿ ಒಂದು ವಿಸ್ಮಯ ನಡೆಯಿತು. ಅದೇನೆಂದರೆ ಚಾಮುಂಡೇಶ್ವರಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ತೆರಳಿದಾಗ ಇವರ ತಲೆ ಮೇಲಾಗಿ ಸಿಡಿಲು ಬಡಿಯಿತು. ಆದರೆ ಇವರಿಗೆ ಅದರಿಂದ ಯಾವುದೇ ತೊಂದರೆಯಾಗದೆ ತಲೆಕೂದಲು ಮಾತ್ರ ಉದುರಿತು. ಮುಂದೆ ಬೋಳಚಾಮರಾಜ ಒಡೆಯರ್ ಎಂದೇ ಹೆಸರಾದರು. ಇವರು 'ಸುಗುಣ ಗಂಭೀರ' ಎಂಬ ಬಿರುದು ಪಡೆದಿದ್ದರು.
ಐದನೇ ಬೆಟ್ಟದ ಚಾಮರಾಜ ಒಡೆಯರ್ 1576ರಿಂದ 1578ರವರೆಗೆ ಕೇವಲ ಎರಡು ವರ್ಷಗಳ ಕಾಲ ಆಡಳಿತ ನಡೆಸಿದರಲ್ಲದೆ, ವೈರಾಗ್ಯ ತಾಳಿದ ಅವರು ಆಡಳಿತವನ್ನು ತನ್ನ ಸಹೋದರರಿಗೆ ವಹಿಸಿಕೊಟ್ಟರು. ಆ ನಂತರ ಆಡಳಿತ ವಹಿಸಿಕೊಂಡ ಒಂದನೇ ರಾಜ ಒಡೆಯರ್ 1578ರಿಂದ 1617ರವರೆಗೆ ಆಡಳಿತ ನಡೆಸಿದರು. ಇವರ ಕಾಲದಲ್ಲಿ ಅಂದರೆ 1610ರಲ್ಲಿ ರಾಜಧಾನಿಯನ್ನು ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ವರ್ಗಾಯಿಸಲಾಯಿತಲ್ಲದೆ, ದಸರಾ ಆಚರಣೆಯೂ ಜಾರಿಗೆ ಬಂದಿತು. [ಯದುವೀರ ಪಟ್ಟಾಭಿಷೇಕ ಕಾರ್ಯಕ್ರಮ ವಿವರ]
1617ರಿಂದ 1637ರವರೆಗೆ ಆರನೇ ಚಾಮರಾಜ ಒಡೆಯರ್ ಆಡಳಿತ ನಡೆಸಿದರು. ಇವರ ಕಾಲದಲ್ಲಿ ಮೈಸೂರು ರಾಜ್ಯ ಇನ್ನಷ್ಟು ವಿಸ್ತಾರಗೊಂಡಿತು. ಇವರು ಸಾಹಿತ್ಯದ ಅಭಿರುಚಿ ಹೊಂದಿದ್ದರು. 1637ರಲ್ಲಿ ಪಟ್ಟಕ್ಕೆ ಬಂದ ಇಮ್ಮಡಿರಾಜ ಒಡೆಯರ್ ವೀರರಾಗಿದ್ದರಲ್ಲದೆ ಒಂದೇ ವರ್ಷದಲ್ಲಿ ಮಲೆವರಗಂಡ, ಸಂಗೀತಲೋಲ, ವೀರ ಶೂರ, ಸಾಹಿತ್ಯ ರತ್ನಾಕರ, ಅಭಯ ಪ್ರತಾಪಾಧೀಶ್ವರ ಮುಂತಾದ ಬಿರುದು ಪಡೆದು 1638ರವರೆಗೆ ಆಡಳಿತ ನಡೆಸಿದರು.
1638ರಿಂದ 1659 ರಣಧೀರ ಕಂಠೀರವ ನರಸರಾಜ ಒಡೆಯರ್ ಆಡಳಿತ ನಡೆಸಿದರು. ಇವರು ಮಹಾವೀರರಾಗಿದ್ದು, 25 ಜಟ್ಟಿಗಳ ಸಂಗಡ ಹೋರಾಡಿ ಗೆದ್ದ ಖ್ಯಾತಿಯೂ ಇವರದಾಗಿತ್ತು. ಸುಮಾರು 20 ವರ್ಷಗಳ ಕಾಲ ಆಡಳಿತ ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
1659ರಿಂದ 1672ರವರೆಗೆ ಆಡಳಿತ ನಡೆಸಿದ ದೊಡ್ಡ ದೇವರಾಜ ಒಡೆಯರ್ ಪರಾಕ್ರಮಿಯಾಗಿದ್ದು, ಇವರ ಕಾಲದಲ್ಲಿ ಭಕ್ತರ ಅನುಕೂಲಕ್ಕಾಗಿ ಚಾಮುಂಡಿಬೆಟ್ಟಕ್ಕೆ ಮೆಟ್ಟಿಲುಗಳನ್ನು ಸ್ಥಾಪಿಸಲಾಯಿತು. ಅಲ್ಲದೆ, ಅನ್ನಛತ್ರ, ಸಾಲುಮರ, ನೀರಿನಕೊಳ ಮತ್ತು ಅಗ್ರಹಾರಗಳನ್ನು ನಿರ್ಮಿಸಿದರು. ಇವರು ರಾಜಕುಲತಿಲಕ, ರಾಜಮಾರ್ತಾಂಡ, ರಾಜಾಧಿರಾಜ, ಪರಮೇಶ್ವರ ಮುಂತಾದ ಬಿರುದಿಗೆ ಪಾತ್ರರಾಗಿದ್ದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ














Click it and Unblock the Notifications