ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಎಸ್ಒಯು ಕುಲಸಚಿವ ಪ್ರೊ. ಪಿ.ಎಸ್. ನಾಯಕ್ ಅಮಾನತು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 15 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(ಕೆಎಸ್ ಒಯು) ಕುಲಸಚಿವ ಪ್ರೊ.ಪಿ.ಎಸ್. ನಾಯಕ್ ಅವರನ್ನು ಬುಧವಾರ ಅಮಾನತುಗೊಳಿಸಲಾಗಿದೆ.

ಕೆಎಸ್ ಒಯುನಲ್ಲಿನ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಶಿಫಾರಸಿನ ಮೇರೆಗೆ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ. ಪ್ರೊ.ನಾಯಕ್ ಅವರನ್ನು ಬುಧವಾರ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಪ್ರೊ.ಸೋಮಶೇಖರ್ ಅವರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.[ತಿಂಗಳ ಕೊನೆಗೆ ಕೆಎಸ್ ಒಯು ಮಾನ್ಯತೆ ನವೀಕರಣ?]

KSOU registrar Professor P.S Nayak suspended

ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಸಮಿತಿಯು ಕೆಎಸ್ ಒಯು ಅಕ್ರಮಗಳ ವಿಚಾರಣೆ ನಡೆಸಿ ರಾಜ್ಯಪಾಲರಿಗೆ ವರದಿ ಸಲ್ಲಿಸಿತ್ತು. ಪಾರದರ್ಶಕತೆ ನಿಯಮ ಉಲ್ಲಂಘನೆ, ಕಂಪ್ಯೂಟರ್ ಖರೀದಿ, ಅಂಕಪಟ್ಟಿ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಎಸ್ ಒಯು ಕುಲಸಚಿವ ಪ್ರೊ.ಪಿ.ಎಸ್. ನಾಯಕ್ ಸೇರಿದಂತೆ 7 ಮಂದಿ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಈ ಸಂಬಂಧ ರಾಜ್ಯಪಾಲರು ವರದಿಯಲ್ಲಿರುವ ಮಾಹಿತಿಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕ್ರಮ ಜರುಗಿಸಿದರು.

English summary
KSOU Professor registrar P.S Nayak suspended. KSOU Financial irregularities in connection with the recommendation of the governor ordered the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X