ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈದುಂಬಿದ ಹಾರಂಗಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

By ಮೈಸೂರು ಪ್ರತಿನಿಧಿ
|
Google Oneindia Kannada News

Recommended Video

ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಎಚ್ ಡಿ ಕುಮಾರಸ್ವಾಮಿ ದಂಪತಿ | Oneindia Kannada

ಮೈಸೂರು, ಜುಲೈ.19: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಪತಿ ಸಮೇತವಾಗಿ ಗುರುವಾರ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು ಕೊಡಗಿನ ಮಳೆಹಾನಿ ಪರಿಸ್ಥಿತಿ ತಿಳಿದು ಸ್ಪಂದಿಸಲು ಬಂದಿದ್ದೇನೆ. ಮೂವತೈದು ವರ್ಷಗಳ ಬಳಿಕ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.

ಜಿಲ್ಲೆಯ ಜಲಾಶಯ, ಜಲಪಾತಗಳು ಉಕ್ಕಿ ಹರಿಯುತ್ತಿವೆ. ಆದರೆ ಮಳೆಯಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿರೋದು ತಿಳಿದಿದೆ. ನಾಡಿನ ಜನರಿಗೆ ನೀರುಣಿಸುವ ಕೊಡಗಿನ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದರು.

ಚಿತ್ರಗಳು : ಹಾರಂಗಿಯಿಂದ ಹಾಲ್ನೊರೆಯುಕ್ಕಿಸುತ್ತಾ ಹರಿದ ನೀರುಚಿತ್ರಗಳು : ಹಾರಂಗಿಯಿಂದ ಹಾಲ್ನೊರೆಯುಕ್ಕಿಸುತ್ತಾ ಹರಿದ ನೀರು

ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಪಕ್ಕದ ಮೈಸೂರು, ಹಾಸನ ಜಿಲ್ಲೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್‌ಡಿಕೆ ತಿಳಿಸಿದರು.

Kumaraswamy offers bagina to Harangi reservoir.

ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಸಚಿವರಾದ ಡಿ.ಕೆ. ಶಿವಕುಮಾರ್, ಎಚ್.ಡಿ. ರೇವಣ್ಣ, ಸಾ.ರಾ. ಮಹೇಶ್, ಶಾಸಕ ಕೆ.ಜಿ. ಬೋಪಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Chief Minister Kumaraswamy offers bagina to Harangi reservoir. Minister DK Shivakumar, HD Revanna, SR Mahesh, MLA KG Bopaiah was present at this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X