'ಚಾಮುಂಡೇಶ್ವರಿಯಿಂದ ಸ್ಪರ್ಧಿಸಿ ನೋಡೋಣ' ಸಿಎಂಗೆ ಎಚ್‌ಡಿಕೆ ಸವಾಲ್

Subscribe to Oneindia Kannada

ಮೈಸೂರು, ಜುಲೈ 11: "ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ನೋಡೋಣ," ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು "ಚಾಮುಂಡೇಶ್ವರಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿ ನೋಡೋಣ" ಎಂದು ಸವಾಲು ಹಾಕಿದರು.

"Let's compete with Chamundeshwari" HDK challenged Siddaramaiah

"ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಏನು ಕೊಡುಗೆ ನೀಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಹಲವಾರು ವರ್ಷ ಈ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸಿದರೂ, ಸರಿಯಾಗಿ ಕುಡಿಯುವ ನೀರಿನ ಸೌಲಭ್ಯ ನೀಡಿಲ್ಲ," ಎಂದು ಹೇಳಿದರು. "ಈ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲಿರುವ ಜಿ.ಟಿ.ದೇವೇಗೌಡ ಸ್ಪರ್ಧೆಯನ್ನು ಸವಾಲಾಗಿ ಸ್ವೀಕರಿಸಿ ಸಿದ್ದರಾಮಯ್ಯರನ್ನು ಸೋಲಿಸಬೇಕು," ಎಂದರು.

ರಾಜ್ಯವೇನು ಸಿದ್ದರಾಮಯ್ಯ ಆಸ್ತಿಯೇ?

ಇದೇ ವೇಳೆ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. "ಸಿದ್ದರಾಮಯ್ಯ ಮತ್ತು ಸಚಿವ ಮಹದೇವಪ್ಪ ಪುತ್ರರನ್ನು ವರುಣಾ ಹಾಗೂ ತಿ.ನರಸೀಪುರ ಕ್ಷೇತ್ರಗಳ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಹೀಗೆ ಮಾಡಲು ಸಂವಿಧಾನದಲ್ಲಿ ಎಲ್ಲಿಯಾದರೂ ಅವಕಾಶ ಇದೆಯಾ? ರಾಜ್ಯವೇನು ಅವರ ಆಸ್ತಿಯೋ?," ಎಂದು ಕಿಡಿಕಾರಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
"Let's contest from Chamundeshwari constituency in the next assembly elections," said former chief minister and JDS state president HD Kumaraswamy, who has challenged Chief Minister Siddaramaiah.
Please Wait while comments are loading...