ಮೈಸೂರು: ಹೊತ್ತಿ ಉರಿದ ಶಾಲಾ ಬಸ್, ತಪ್ಪಿದ ಭಾರೀ ಅನಾಹುತ

Posted By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ನವೆಂಬರ್ 7: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಮೈಸೂರಿನ ಕುವೆಂಪು ನಗರದ ಖಾಸಗಿ ಶಾಲೆಯ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಮಾರುತಿ ಒಮ್ನಿ ವ್ಯಾನ್ ವಿಜಯಾ ಬ್ಯಾಂಕ್ ಸರ್ಕಲ್ ಬಳಿ ಬರುತ್ತಿದ್ದಂತೆಯೇ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ.

Major tragedy averted as school bus catches fire in Mysuru

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಸ್ತೆಯಲ್ಲಿ ನಿಂತಿದ್ದವರು ಕೂಗಿಕೊಂಡಿದ್ದಾರೆ. ಇದರಿಂದ ಜಾಗೃತನಾದ ವ್ಯಾನ್‌ ಚಾಲಕ ಮಕ್ಕಳನ್ನೆಲ್ಲ ಕೆಳಗಿಳಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಸರಸ್ವತಿಪುರಂ ಠಾಣೆಯ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ. ಒಮ್ನಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Major tragedy averted as school bus catches fire at Kuvempunagar in Mysuru on Tuesday. No casualties reported in the incident.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ