ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ತಾರದ ರಂಗೋಲಿಯೊಂದಿಗೆ ಮಹಿಳಾ ದಸರೆಗೆ ಉಮಾಶ್ರೀ ಚಾಲನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 21 : ನಾಡಹಬ್ಬ ದಸರಾ ಮಹೋತ್ಸವ - 2017ರ ಮಹಿಳಾ ದಸರಾ ಕಾರ್ಯಕ್ರಮವನ್ನು ಸಚಿವೆ ಉಮಾಶ್ರೀ ಉದ್ಘಾಟಿಸಿದ್ದಾರೆ. ಈ ಹಿನ್ನೆಲೆ ದಸರೆ ಪ್ರಯುಕ್ತ ಮಹಿಳೆಯರಿಗಾಗಿ ಮೈಸೂರು ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದ ಆವರಣದಲ್ಲಿ ರಂಗೋಲಿ ಸ್ಪರ್ಧೆ ಯನ್ನು ಆಯೋಜಿಸಲಾಗಿತ್ತು.

LIVE: ನಾಡಹಬ್ಬ ಉದ್ಘಾಟನೆ ನೆರವೇರಿಸಿದ ಕವಿ ನಿಸಾರ್ ಅಹ್ಮದ್LIVE: ನಾಡಹಬ್ಬ ಉದ್ಘಾಟನೆ ನೆರವೇರಿಸಿದ ಕವಿ ನಿಸಾರ್ ಅಹ್ಮದ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ರಂಗೋಲಿ ಚಿತ್ರ ರಚಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.

ವೈಭವದ ದಸರಾ ವಿಶೇಷ ಪುಟ

Minister Umashree has inaugurated Mahila Dasara 2017 on Sep 21stg

Recommended Video

Mysuru Yaduveer Urs confirms about Trishika Kumari's presence in Mysuru Dasara | Oneindia Kannada

ಬಳಿಕ ಮಾತನಾಡಿದ ಅವರು, ಮಹಿಳೆಯರು ಅವರಿಗರಿವಿಲ್ಲದೇ ಹಲವಾರು ಕಲೆಗಳನ್ನು ತಮ್ಮಲ್ಲಿ ಪೋಷಿಸಿರುತ್ತಾರೆ. ಅದರ ಪ್ರದರ್ಶನಕ್ಕೆ ಸೂಕ್ತ ಅವಕಾಶ, ವೇದಿಕೆಗಳನ್ನು ದೊರಕಿಸಿಕೊಟ್ಟಲ್ಲಿ ಅವರಲ್ಲಿನ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ ಎಂದರು.

Photos : 407ನೇ ಮೈಸೂರು ದಸರಾಗೆ ವೈಭವದ ಚಾಲನೆ

Minister Umashree has inaugurated Mahila Dasara 2017 on Sep 21stg

ಮೈಸೂರು ದಸರಾ ಸಂದರ್ಭದಲ್ಲಿ ಅವರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿರುವುದು ಸಂತಸದ ವಿಷಯವೇ. ಚಿತ್ತಾಕರ್ಷಕವಾಗಿ ರಂಗೋಲಿ ರಚನೆಯಲ್ಲಿ ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಮಹಿಳೆಯರು ಸಿಕ್ಕ ಅವಕಾಶವನ್ನು ತಮ್ಮ ಪ್ರತಿಭೆ ಅನಾವರಣಗೊಳಿಸಲು ಬಳಸಿಕೊಳ್ಳಿ ಎಂದು ತಿಳಿಸಿದರು. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದರಲ್ಲದೇ, ಎಲ್ಲರನ್ನು ತಾಯಿ ಚಾಮುಂಡೇಶ್ವರಿ ಅನುಗ್ರಹಿಸಲಿ ಎಂದರು.

English summary
Minister for women and child development Umashree has inaugurated Mahila Dasara 2017 on Sep 21st. By drawing a rangoli She inaugurates the programmes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X