ಮೈಸೂರಿನಲ್ಲಿ ಹೊಸ ವರ್ಷ, ನಿಯಮ ಮೀರಿದರೆ ಕ್ರಮ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಡಿಸೆಂಬರ್ 31: ಮೋಜು ಮಸ್ತಿ ಮಾಡುವುದನ್ನೇ ಹೊಸ ವರ್ಷದ ಆಚರಣೆ ಎಂದು ನಂಬಿರುವ ಮಂದಿಗೆ ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆ ಒಂದಷ್ಟು ನಿಬಂಧನೆಯನ್ನು ಹಾಕಿದ್ದು, ಅದನ್ನು ಮೀರಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಇದರಿಂದ ವರ್ಷಾಚರಣೆ ನೆಪದಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಡ್ಡಾಡುವ ಪುಂಡಪೋಕರಿಗಳ ಹುಚ್ಚಾಟಕ್ಕೆ ಕಡಿವಾಣ ಬೀಳಲಿದೆ.

ಈಗಾಗಲೇ ಈ ಸಂಬಂಧ ಕಟ್ಟು ನಿಟ್ಟಿನ ಆದೇಶವನ್ನು ಮೈಸೂರು ನಗರ ಪೊಲೀಸ್ ಕಮೀಷಿನರ್ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ಹೊರಡಿಸಿದ್ದು, ಸಾರ್ವಜನಿಕರು ಸೇರಿದಂತೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ಅನ್ವಯವಾಗಲಿದ್ದು, ಎಲ್ಲರೂ ಪಾಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಅಜಾಗರೂಕತೆಯಿಂದ ವರ್ತಿಸಿದರೆ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.[ಮೈಸೂರಿನಲ್ಲಿ ಕೇಕ್ ಉತ್ಸವ: ಗಮನ ಸೆಳೆವ ದುಬೈ ಬುರ್ಜ್]

Police commissioner E Subramanya rao

ಆಯುಕ್ತರ ಆದೇಶದಲ್ಲೇನಿದೆ?

ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆಗೆ ಮೈಸೂರು ನಗರದ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್‍ ಗಳಲ್ಲಿ ಮಧ್ಯರಾತ್ರಿ 12.30ರ ತನಕ ಮಾತ್ರ ಅನುಮತಿ ನೀಡಲಾಗಿದ್ದು ಅದರೊಳಗೆ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಅಂತ್ಯಗೊಳಿಸಬೇಕು. ಈ ಅನುಮತಿಯನ್ನು ಸಿಎಲ್-2 ವರ್ಗದ ಮದ್ಯದ ಅಂಗಡಿಗಳಿಗೆ ನೀಡಲಾಗಿರುವುದಿಲ್ಲ. ಮದ್ಯ ಸರಬಾರಾಜನ್ನು ಮಧ್ಯರಾತ್ರಿ 12.30ರೊಳಗೆ ಕಡ್ಡಾಯವಾಗಿ ಮುಕ್ತಾಯ ಮಾಡಬೇಕು. ಆ ನಂತರ ಮದ್ಯಯ ಸರಬರಾಜು ಮಾಡಬೇಕಾದಲ್ಲಿ ಅಬಕಾರಿ ಇಲಾಖೆಯ ಅನುಮತಿ ಕಡ್ಡಾಯ ಎಂದಿದ್ದಾರೆ.

ವಿಶೇಷ ಕಾರ್ಯಕ್ರಮಗಳನ್ನು ನಡೆಸುವ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳು ಪೊಲೀಸ್ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು. ಧ್ವನಿವರ್ಧಕವನ್ನು ಅಳವಡಿಸುವವರು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಬಾಕ್ಸ್ ಮಾದರಿ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು.

new year 2017

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು, ನಿರ್ಲಕ್ಷ್ಯ, ಅತಿವೇಗ ಚಾಲನೆ, ವೀಲಿಂಗ್ ಮತ್ತು ರೇಸಿಂಗ್ ಮಾಡುವುದು ಹಾಗೂ ಕಾರುಗಳಲ್ಲಿ ಅತಿಯಾಗಿ ಮ್ಯೂಸಿಕ್ ಹಾಕಿಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ. ಮೀರಿದರೆ ಕ್ರಮ

ಚಾಮುಂಡಿ ಬೆಟ್ಟಕ್ಕೆ ರಾತ್ರಿ 10 ಗಂಟೆಯ ನಂತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. (ಇದು ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಸುವುದಿಲ್ಲ.) ಹೀಗಾಗಿ ವರ್ಷಾಚರಣೆಗಾಗಿ ಇಲ್ಲಿಗೆ ತೆರಳಲು ಅವಕಾಶವಿಲ್ಲ. ಇನ್ನು ಹೊಸವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗತರುವ ರೀತಿಯಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ, ನಂಗಾನಾಚ್ ನೃತ್ಯಗಳನ್ನು ಆಯೋಜಿಸುವುದು ಮತ್ತು ಮಾಡುವುದು, ಜತೆಗೆ ಜೂಜಾಟವನ್ನು ನಿರ್ಬಂಧಿಸಲಾಗಿದೆ.

ಡಿ.31ರಂದು ರಾತ್ರಿ ಮೈಸೂರು ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದು. ಸಾರ್ವಜನಿಕರಿಗೆ ಏನಾದರೂ ತೊಂದರೆಯಾದಲ್ಲಿ ನಗರ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 0821-2418339, 0821-2418139, 100ಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂರ್ಪಕಿಸಬಹುದಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mysore new year, beyond the rule action. Mysore City Police commissioner E Subramanya rao order to persist.
Please Wait while comments are loading...